ಚಾಮರಾಜನಗರ

ಮತದಾರರ ಪಟ್ಟಿಗೆ ಹೆಸರು ಸೇರಿಸಿಕೊಳ್ಳಿ

ಹನೂರು: ಕೊಳ್ಳೇಗಾಲ ಗ್ರೇಡ್-2 ತಹಸೀಲ್ದಾರ್ ನಂಜುಂಡಯ್ಯ ಅವರ ಅಧ್ಯಕ್ಷತೆಯಲ್ಲಿ ಮತದಾರರ ದಿನಾಚರಣೆ ಅಂಗವಾಗಿ ಪಟ್ಟಣದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಅವರು ಮಾತನಾಡಿ, 18 ವರ್ಷ ತುಂಬಿದ ಯುವ ಮತದಾರರು ನಮೂನೆ-6ರ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿ ಸಂಬಂಧಿಸಿದ ಅಧಿಕಾರಿಗಳಿಗೆ ಸಲ್ಲಿಸಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಸೇರ್ಪಡೆ ಮಾಡಿಕೊಳ್ಳಬೇಕು. ಇದಕ್ಕೆ ಸಂಬಂಧಪಟ್ಟಂತೆ ಬೂತ್ ಮಟ್ಟದ ಅಧಿಕಾರಿಗಳು ಜ.25  ರಂದು ನಡೆಯುವ ಮತದಾರರ ದಿನಾಚರಣೆಯಲ್ಲಿ ಸೇರ್ಪಡೆಯಾಗದ ಮತದಾರರಲ್ಲಿ ಜಾಗೃತಿ ಮೂಡಿಸಲಿದ್ದಾರೆ ಎಂದು ತಿಳಿಸಿದರು. ಶಿರಸ್ತೇದಾರ್ ಶ್ರೀನಿವಾಸ್, ಉಪತಹಸೀಲ್ದಾರ್‌ಗಳಾದ ಪ್ರಕಾಶ್‌ಮೂರ್ತಿ, ಭೈರಯ್ಯ, ಬೂತ್ ಮಟ್ಟದ ಅಧಿಕಾರಿಗಳು ಹಾಜರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ, 1 ವರ್ಷ ಶಾಂತಿ ಕಾಪಾಡುವ ಷರತ್ತು..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!