ಉದ್ಯೋಗ ಮೇಳ: 213 ಮಂದಿ ಆಯ್ಕೆ
ಗುಂಡ್ಲುಪೇಟೆ: ತಾಲೂಕಿನಲ್ಲಿ ಉದ್ಯೋಗಾಕಾಂಕ್ಷಿಗಳು ಹೆಚ್ಚಿರುವ ಹಿನ್ನೆಲೆಯಲ್ಲಿ 4 ತಿಂಗಳಿಗೊಮ್ಮೆ ಉದ್ಯೋಗ ಮೇಳ ನಡೆಸುವ ಅಗತ್ಯವಿದೆ ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರದ ಪ್ರಾಂಶುಪಾಲ ಪುಟ್ಟಮಾದಯ್ಯ ತಿಳಿಸಿದರು.
ಪಟ್ಟಣದ ಹೊರ ವಲಯದಲ್ಲಿರುವ ಸರ್ಕಾರಿ ಕೈಗಾರಿಕೆ ತರಬೇತಿ ಕೇಂದ್ರದ ಆವರಣದಲ್ಲಿ ಜಿಲ್ಲಾ ಉದ್ಯೋಗ ಮತ್ತು ತರಬೇತಿ ಇಲಾಖೆ, ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರದ ವತಿಯಿಂದ ನಡೆದ ಉದ್ಯೋಗ ಮೇಳ ಉದ್ಘಾಟಿಸಿ ಮಾತನಾಡಿ, ತಾಲೂಕು ಹೆಚ್ಚು ಒಣ ಭೂಮಿ ಹೊಂದಿದ್ದು, ಉದ್ಯೋಗಾವಕಾಶ ಕಡಿಮೆಯಿದೆ. ಸ್ಥಳೀಯವಾಗಿ ಉದ್ಯೋಗ ಮೇಳ ನಡೆಸುವುದರಿಂದ ಅವಕಾಶಗಳ ಸದುಪಯೋಗ ಪಡೆದು ತಾಲೂಕಿನ ಯುವ ಜನರು ಉದ್ಯೋಗ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ಹೆಸರು ನೋಂದಾಯಿಸಿದ್ದ 482 ಅಭ್ಯರ್ಥಿಗಳ ಪೈಕಿ 213 ಮಂದಿ ಉದ್ಯೋಗಕ್ಕೆ ಆಯ್ಕೆಯಾದರು. ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಸಿ.ಉಮಾ ಅಧ್ಯಕ್ಷತೆ ವಹಿಸಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.