ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಾಮರಾಜನಗರ

ಸಿದ್ಧಲಿಂಗೇಶ್ವರ ದೇವಾಲಯಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

Parashurama
Updated On : 25 Jan 2013, 10:37 am

ಚಾಮರಾಜನಗರ: ತಾಲೂಕಿನ ಹರದನಹಳ್ಳಿಯ ಶ್ರೀ ಯಡಿಯೂರು ಸಿದ್ಧಲಿಂಗೇಶ್ವರ ದೇವಾಲಯಕ್ಕೆ ಜಿಲ್ಲಾಧಿಕಾರಿ ಎನ್. ಜಯರಾಂ ಶುಕ್ರವಾರ ಭೇಟಿ ನೀಡಿ ಜೀರ್ಣೋದ್ಧಾರ ಕಾಮಗಾರಿ ಪರಿಶೀಲಿಸಿದರು.
ದೇವಾಲಯದ ಕಾಮಗಾರಿ ಸ್ಥಗಿತಗೊಂಡಿದೆ ಎಂದು ಹರದನಹಳ್ಳಿ ಗ್ರಾಮಸ್ಥರು ನೀಡಿದ ದೂರಿನ ಮೇರೆಗೆ ದೇವಾಲಯಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ, ಕಾಮಗಾರಿ ಸ್ಥಗಿತಗೊಂಡಿರುವುದಕ್ಕೆ ಸ್ಥಳದಲ್ಲಿದ್ದ ಭೂಸೇನೆ ನಿಗಮದ ಅಧಿಕಾರಿಗಳಿಂದ ವಿವರಣೆ ಪಡೆದರು.
ಯಡಿಯೂರು ಸಿದ್ಧಲಿಂಗೇಶ್ವರ ದೇವಾಲಯ ಜೀರ್ಣೋದ್ಧಾರ ಕಾಮಗಾರಿಗೆ 2.66 ಕೋಟಿ ಅಂದಾಜು ಪಟ್ಟಿ ನಿಗದಿಯಾಗಿದ್ದು, ಅದರಲ್ಲಿ 2 ಕೋಟಿ ಈಗಾಗಲೇ ಬಿಡುಗಡೆಯಾಗಿದೆ. ಬಿಡುಗಡೆಯಾಗಿರುವ ಅನುದಾನದಲ್ಲಿ ಕಾಮಗಾರಿ ನಿರ್ವಹಿಸಲಾಗಿದೆ. ಉಳಿದ ಅನುದಾನ ಬಿಡುಗಡೆಯಾಗದಿರುವುದರಿಂದ ಕಾಮಗಾರಿ ಸ್ಥಗಿತಗೊಂಡಿದೆ ಎಂದು ಭೂಸೇನೆ ನಿಗಮದ ಅಧಿಕಾರಿಗಳು ಜಿಲ್ಲಾಧಿಕಾರಿಗೆ ಮಾಹಿತಿ ನೀಡಿದರು.
ದೇವಸ್ಥಾನದ ಕಾಮಗಾರಿ ಪೂರ್ಣಗೊಳಿಸಲು ಉಳಿದ ಅನುದಾನ ಬಿಡುಗಡೆ ಮಾಡುವ ಸಂಬಂಧ ಕ್ರಮ ವಹಿಸಲು ಜಿಲ್ಲಾಧಿಕಾರಿಗಳು ಹೇಳಿದರು.
ಒಟ್ಟು 52 ಅಡಿ ಅಗಲ, 118 ಅಡಿ ಉದ್ದದ ಅಳತೆಯ ದೇವಸ್ಥಾನದ ಜಾಗದಲ್ಲಿ 12 ಅಡಿ ಒತ್ತುವರಿಯಾಗಿದೆ ಎಂದು ಗ್ರಾಮಸ್ಥರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ಜಾಗವನ್ನು ಕೂಡಲೇ ಸರ್ವೆ ಮಾಡಿಸಿ ಒತ್ತುವರಿಗೊಂಡಿದ್ದಲ್ಲಿ ತೆರವುಗೊಳಿಸಲು ಕ್ರಮ ವಹಿಸುವಂತೆ ತಹಶೀಲ್ದಾರ್ಗೆ ಸೂಚಿಸಿದರು.
ದೇವಾಲಯದ ನಿರ್ವಹಣೆ ಹಾಗೂ ರಕ್ಷಣೆಗಾಗಿ ಒಬ್ಬರನ್ನು ನಿಯೋಜಿಸಬೇಕು ಹಾಗೂ ಮುಂಭಾಗದಲ್ಲಿ ಹಸಿರು ಹುಲ್ಲಿನ ಹೊದಿಕೆ ವ್ಯವಸ್ಥೆ ಮತ್ತು ದೇವಸ್ಥಾನದಲ್ಲಿ ನೈವೇದ್ಯದ ಪೂಜಾ ಸಾಮಗ್ರಿಗಳನ್ನು ಇಡಲು ಪ್ರತ್ಯೇಕ ಕೊಠಡಿ ನಿರ್ಮಿಸಲು ಬೇಕಾಗಿರುವ ಅಂದಾಜು ಪಟ್ಟಿ ಕಳುಹಿಸಿಕೊಡಲು ಭೂಸೇನಾ ನಿಗಮದ ಅಧಿಕಾರಿಗೆ ನಿರ್ದೇಶನ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಿ ಭಾರತಿ, ತಹಶೀಲ್ದಾರ್ ಚಂದ್ರಕಾಂತ್ ಭಜಂತ್ರಿ, ಪ್ರೊಬೇಷನರಿ ಉಪ ವಿಭಾಗಾಧಿಕಾರಿ ವಿಜಯ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments