'ಚುನಾಯಿತ ಪ್ರತಿನಿಧಿಗಳು ಸಕ್ರಿಯರಾಗಿ'
ಚಾಮರಾಜನಗರ: ಚುನಾಯಿತ ಪ್ರತಿನಿಧಿಗಳು ತಮ್ಮ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಉತ್ತಮ ಕಾರ್ಯ ನಿರ್ವಹಿಸಬೇಕೆಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ತಿಳಿಸಿದರು.ತಾಲೂಕಿನ ವೆಂಕಟಯ್ಯನಛತ್ರ ಗ್ರಾಮದಲ್ಲಿ ತಾಪಂ ಸದಸ್ಯೆ ಕಾಂತಮಣಿ ಅವರ ಪ್ರದೇಶಾಭಿವೃದ್ಧಿ ಅನುದಾನದ ವತಿಯಿಂದ ರಸ್ತೆ ಮತ್ತು ಡಾಂಬರೀಕರಣ, ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿಗಳಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದು, ಕುಡಿಯುವ ನೀರಿಗೆ ಹಾಹಾಕಾರ ಎದುರಾಗಿದೆ. ಜನಪ್ರತಿನಿಧಿಗಳು ಸಕ್ರಿಯವಾಗಿ ಕರ್ತವ್ಯ ನಿರ್ವಹಿಸಿ, ಸರ್ಕಾರದಿಂದ ಬರುವ ಅನುದಾನವನ್ನು ಸದ್ಬಳಕೆ ಮಾಡಬೇಕೆಂದು ಕರೆ ನೀಡಿದರು.ತಾಪಂ ಸದಸ್ಯೆ ಕಾಂತಾಮಣಿ ಮಹೇಶ್ ಮಾತನಾಡಿ, 2011-12 ನೇ ಸಾಲಿನ ತಾ.ಪಂ. ಯೋಜನೆಗಳಾದ ವಿಶೇಷ ಅಭಿವೃದ್ಧಿ ಯೋಜನೆ, ಯೋಜನೇತರ ಬಾಬ್ತಿನಲ್ಲಿ ರಸ್ತೆ ಡಾಂಬರೀಕರಣಕ್ಕೆ 3 ಲಕ್ಷ ಹಾಗೂ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿಗೆ 1.50 ಲಕ್ಷ ಅನುದಾನ ಬಿಡುಗಡೆಯಾಗಿದೆ. ತಾಪಂ ವತಿಯಿಂದ ಮಹಿಳಾ ಸ್ವ-ಸಹಾಯ ಸಂಘಗಳಿಗೆ ಸುತ್ತೂರು ನಿಧಿ ಸಹಾಯಧನವನ್ನು ಸಹ ಹಂತ ಹಂತವಾಗಿ ವಿತರಿಸಿಲಾಗುವುದು ಎಂದರು.ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷೆ ಮರಮ್ಮ, ಎಂಪಿಸಿಎಸ್‌ಸಿ ನಿರ್ದೇಶಕರಾದ ಬಸವರಾಜಪ್ಪ, ಹರದನಹಳ್ಳಿ ಸುಂದರಪ್ಪ, ಹಾಗೂ ಗ್ರಾಪಂ ಸದಸ್ಯರಾದ ರಂಗಸ್ವಾಮಿ, ಶಿವಮಲ್ಲು, ಪಿಎಸಿಸಿ ಅಧ್ಯಕ್ಷ ಪುಟ್ಟಪ್ಪ, ಪುಟ್ಟಸ್ವಾಮಿ ಗ್ರಾಪಂ ಉಪಾಧ್ಯಕ್ಷರು, ಸದಸ್ಯರು ಹಾಜರಿದ್ದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.