ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಾಮರಾಜನಗರ

ದೀನ, ದುರ್ಬಲರ ಏಳಿಗೆಗೆ ಆದಿ ಶ್ರೀ ಕೊಡುಗೆ ಅಪಾರ

Parashurama
Updated On : 29 Jan 2013, 12:27 pm

ಅರಸೀಕೆರೆ: ಆದಿಚುಂಚನಗಿರಿ ಬಾಲಗಂಗಾಧರನಾಥ ಶ್ರೀಗಳು ಶಿಕ್ಷಣ, ಆರೋಗ್ಯ, ಸಾಮಾಜಿಕ ಸೇವೆಯಂತಹ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ದೀನ, ದುರ್ಬಲರ ಉದ್ಧಾರಕ್ಕಾಗಿ ನಾಡಿಗೆ ನೀಡಿದ ಕೊಡುಗೆ ಅಪಾರವಾದುದು. ನಾಡಿನ ಮೂಲೆ-ಮೂಲೆಗಳಲ್ಲಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಸೃಷ್ಟಿಸಿರುವುದಾಗಿ ಶಾಸಕ ಕೆ.ಎಂ.ಶಿವಲಿಂಗೇಗೌಡ ಅಭಿಪ್ರಾಯಪಟ್ಟರು.
ತಾಲೂಕಿನ ತಿರುಪತಿಹಳ್ಳಿ ಗ್ರಾಮಸ್ಥರು ಏರ್ಪಡಿಸಿದ್ದ ಬಾಲಗಂಗಾಧರನಾಥ ಸ್ವಾಮಿಯ ಪುಣ್ಯಾರಾಧನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಶಿಕ್ಷಣದಿಂದಲೇ ದೇಶದ ಅಭಿವೃದ್ಧಿ ಸಾಧ್ಯ ಎಂಬುದನ್ನು ಮನಗಂಡಿದ್ದ ಶ್ರೀಗಳು ಶಿಕ್ಷಣಕ್ಕೆ ಹೆಚ್ಚಿನ ಹೊತ್ತು ನೀಡಿ ಗ್ರಾಮಾಂತರ ಪ್ರದೇಶಗಳಲ್ಲಿ ಶಾಲೆಗಳನ್ನು ತೆರೆದು ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಗ್ರಾಮೀಣ ವಿದ್ಯಾರ್ಥಿಗಳಿಗೆ ಆಸರೆಯಾಗಿದ್ದರು ಎಂದು ಬಣ್ಣಿಸಿದರು.
27 ವರ್ಷಗಳ ಹಿಂದೆ ಆದಿಚುಂಚನಗಿರಿ ಮಠಕ್ಕೆ ಬಾಲಗಂಗಾಧರನಾಥ ಸ್ವಾಮೀಜಿ ಪೀಠಾಧ್ಯಕ್ಷರಾದಾಗ ಮಠ ಆರ್ಥಿಕವಾಗಿ ಹಿಂದುಳಿದಿದ್ದು ಬಂದ ಭಕ್ತರಿಗೆ ಅನ್ನದಾಸೋಹ ನೀಡಲು ಸಾಧ್ಯವಾಗದಂತಹ ಪರಿಸ್ಥಿತಿ ಇತ್ತು.
ಆದರೆ ಶ್ರೀಗಳು ಹಳ್ಳಿ ಹಳ್ಳಿಗಳನ್ನು ಸುತ್ತಿ ಭಕ್ತರನ್ನು ಸೆಳೆದು ಮಠವನ್ನು ಸಮೃದ್ಧವಾಗಿ ಬೆಳೆಸಿ ಆದಿಚುಂಚನಗಿರಿ ಸಂಸ್ಥಾನ ಇಂದು ಪ್ರವಾಸಿ ತಾಣವಾಗಿ ಬೆಳೆಯಲು ಹಗಲಿರುಳು ಶ್ರಮಿಸಿ ಅನ್ನದಾಸೋಹ, ಜ್ಞಾನದಾಸೋಹದ ಮೂಲಕ ತ್ರಿವಿಧ ದಾಸೋಹಿಯಾಗಿ ಭಕ್ತರ ಪಾಲಿಗೆ ನಡೆದಾಡುವ ದೇವರಾಗಿದ್ದರು. ಅಂತಹ ಮಹಾತ್ಮರು ಮತ್ತೊಮ್ಮೆ ಈ ನಾಡಿನಲ್ಲಿ ಜನಿಸಲಿ ಎಂದರು.
ತಾಲೂಕು ಒಕ್ಕಲಿಗ ಸಮಾಜದ ಅಧ್ಯಕ್ಷ ಆರ್.ಅನಂತ್‌ಕುಮಾರ್ ಮಾತನಾಡಿ ಸ್ವಾಮೀಜಿಯವರ ಒಂದೊಂದು ಆಲೋಚನೆಗಳು ಭಕ್ತರನ್ನು, ನಾಡಿನ ಜನರನ್ನು ಸಂರಕ್ಷಿಸುವುದೇ ಆಗಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments