ಪ್ರಾಣಿಬಲಿ ತಡೆಗೆ ಹೆಚ್ಚುವರಿ ಮ್ಯಾಜಿಸ್ಟ್ರೇಟ್ ನೇಮಕ
ಚಾಮರಾಜನಗರ: ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರು ಜಾತ್ರೆಯಲ್ಲಿ ಬಂದೋಬಸ್ತ್ ಕರ್ತವ್ಯ ಉಸ್ತುವಾರಿ ಹಾಗೂ ಪ್ರಾಣಿಬಲಿ ತಡೆಗಟ್ಟುವ ಸಂಬಂಧ ಹೆಚ್ಚುವರಿ ಸೆಕ್ಟರ್ ಮ್ಯಾಜಿಸ್ಟ್ರೇಟ್ಗಳನ್ನು ನಿಯೋಜಿಸಿ ಜಿಲ್ಲಾಧಿಕಾರಿ ಎನ್.ಜಯರಾಂ ಆದೇಶಿಸಿದ್ದಾರೆ.
28ರಂದು ಬೆಳಗ್ಗೆ 8ರಿಂದ ರಾತ್ರಿ 8ರವರೆಗೆ ಹಾಗೂ ರಾತ್ರಿ 8ರಿಂದ ಬೆಳಗ್ಗೆ 8ರವರೆಗೆ ಕೊಳ್ಳೇಗಾಲ ಕ್ಷೇತ್ರ ಶಿಕ್ಷಣಾಧಿಕಾರಿ ಮಲ್ಲಿಕಾರ್ಜುನ, 29ರಂದು ಬೆಳಗ್ಗೆ 8ರಿಂದ ರಾತ್ರಿ 8ರವರಗೆ ಹಾಗೂ 31ರಂದು ರಾತ್ರಿ 8ರಿಂದ ಬೆಳಗ್ಗೆ 8ರವರೆಗೆ ಪಶುಸಂಗೋಪಾನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಪ್ರಕಾಶ್ ಕಾರ್ಯ ನಿರ್ವಹಿಸುವಂತೆ ಸೂಚಿಸಲಾಗಿದೆ. 30ರಂದು ರಾತ್ರಿ 8ರಿಂದ ಬೆಳಗ್ಗೆ 8ರವರೆಗೆ ಫೆ.1ರಂದು ಬೆಳಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕ ಎಚ್.ಶಶಿಧರ್ ಕಾರ್ಯ ನಿರ್ವಹಿಸುತ್ತಾರೆ.
ಜ.29ರಂದು ರಾತ್ರಿ 8ರಿಂದ ಬೆಳಗ್ಗೆ 8 ಗಂಟೆವರೆಗೆ ಹಾಗೂ 31ರಂದು ಬೆಳಗ್ಗೆ 8ರಿಂದ ರಾತ್ರಿ 8ರವರೆಗೆ ಕಾವೇರಿ ನೀರಾವರಿ ನಿಗಮದ ಸಹಾಯಕ ಕಾರ್ಯಪಾಲಕ ಅಭಿಯಂತರ ಮಂಜುನಾಥ, ಜ.30ರಂದು ಬೆಳಗ್ಗೆ 8ರಿಂದ ರಾತ್ರಿ 8ರವರೆಗೆ, ಫೆ.1ರಂದು ರಾತ್ರಿ 8ರಿಂದ ಬೆಳಗ್ಗೆ 8ರವರೆಗೆ ಕಾವೇರಿ ನೀರಾವರಿ ನಿಗಮದ(ಕಾಮಗೆರೆ) ಕೆಸಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ರಾಧಾಕೃಷ್ಣ ಕಾರ್ಯ ನಿರ್ವಹಿಸುವಂತೆ ಆದೇಶಿಸಲಾಗಿದೆ.
ಈ ಐವರು ಅಧಿಕಾರಿಗಳು ಚಿಕ್ಕಲ್ಲೂರು ಕ್ಷೇತ್ರದ ಜಾತ್ರೆಯಲ್ಲಿ ಬಂದೊಬಸ್ತ್ ಕರ್ತವ್ಯ ಹಾಗೂ ಪ್ರಾಣಿಬಲಿ ತಡೆಗಟ್ಟುವ ಸಂಬಂಧ ಹೆಚ್ಚುವರಿ ಮ್ಯಾಜಿಸ್ಟ್ರೇಟ್ಗಳಾಗಿ ಕಾರ್ಯ ನಿರ್ವಹಿಸಲಿದ್ದು, ಕಾನೂನು ರೀತಿ ಅಗತ್ಯ ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಜಯರಾಂ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.