ಭಕ್ತ ಶ್ರೇಷ್ಠ ಕನಕನ ಭವ್ಯ ಮೆರವಣಿಗೆ
ಚಾಮರಾಜನಗರ: ಮಾಜಿ ಪ್ರಧಾನಿ ಐ.ಕೆ. ಗುಜ್ರಾಲ್ ನಿಧನದಿಂದಾಗಿ ಮುಂದೂಡಲ್ಪಟ್ಟಿದ್ದ ಕನಕ ಜಯಂತಿಯನ್ನು ಜಿಲ್ಲಾಡಳಿತದಿಂದ ಮಂಗಳವಾರ ಆಚರಿಸಲಾಯಿತು.
ಜಯಂತಿ ಅಂಗವಾಗಿ ಏರ್ಪಡಿಸಿದ್ದ ಭಕ್ತ ಶ್ರೇಷ್ಠ ಕನಕದಾಸರ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ವಿಜೃಂಭಣೆಯಿಂದ ನಡೆಯಿತು.
ನಗರದ ಪ್ರವಾಸಿ ಮಂದಿರದ ಬಳಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ನಾಗಶ್ರೀ ಪ್ರತಾಪ್ ಕನಕದಾಸರ ಭಾವಚಿತ್ರಕ್ಕೆ ಪುಷ್ಪ ಹಾಕುವುದರ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.
ವಿವಿಧ ಗ್ರಾಮಗಳಿಂದ ಅಲಂಕರಿಸಿಕೊಂಡು ಬಂದಿದ್ದ ಕನಕದಾಸರ ಭಾವಚಿತ್ರಗಳು, ನಾದಸ್ವರ, ನಂದಿ ಧ್ವಜ, ಪೂಜಾ ಕುಣಿತ, ಕಂಸಾಳೆ ತಂಡ, ಗೊರವರ ಕುಣಿತ, ಗಾಡಿಗೊಂಬೆಯ ಜಾನಪದ ಕಲಾತಂಡಗಳೊಂದಿಗೆ ಮೆರವಣಿಗೆ ನಗರದ ಗುಂಡ್ಲುಪೇಟೆ ವೃತ್ತ, ದೊಡ್ಡಂಗಡಿ ಬೀದಿ, ಚಿಕ್ಕ ಅಂಗಡಿ ಬೀದಿ, ಸಂತೇಮರಹಳ್ಳಿ ವೃತ್ತ, ಡಿವಿಯೇಷನ್ ರಸ್ತೆಯ ಮೂಲಕ ಕಾರ್ಯಕ್ರಮದ ಸ್ಥಳ ಪೇಟೆ ಪ್ರೈಮರಿ ಶಾಲಾವರಣದವರೆಗೆ ನಡೆಯಿತು.
ಮೆರವಣಿಗೆಯಲ್ಲಿ ಶಾಸಕ ಸಿ. ಪುಟ್ಟರಂಗಶೆಟ್ಟಿ, ವಿಧಾನ ಪರಿಷತ್ ಸದಸ್ಯ ಮಲ್ಲಿಕಾರ್ಜುನಪ್ಪ, ಜಿಲ್ಲಾಧಿಕಾರಿ ಎನ್. ಜಯರಾಂ, ಜಿ.ಪಂ. ಉಪಾಧ್ಯಕ್ಷ ಮಹದೇವಪ್ಪ, ತಾಪಂ ಅಧ್ಯಕ್ಷ ಬಸವಣ್ಣ, ಉಪಾಧ್ಯಕ್ಷೆ ಪಾರ್ವತಮ್ಮ, ಸದಸ್ಯ ಪದ್ಮಚಂದ್ರು, ಜಿಪಂ ಸಿಇಓ ಸೋಮಶೇಖರಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕ ಮಂಜಪ್ಪ ಕುರಬರ ಸಂಘದ ಜನ್ನೂರು ಮಹದೇವು, ಬಾಲರಾಜು, ನಗರಸಭಾ ಸದಸ್ಯರು, ಮತ್ತಿತರರು ಭಾಗವಹಿಸಿದ್ದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.