ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಾಮರಾಜನಗರ

ಕೆಜೆಪಿ ಮುಖಂಡರ ಜಿಲ್ಲಾ ಪ್ರವಾಸ ಇಂದು

Parashurama
Updated On : 1 Mar 2013, 9:53 am

ಚಾಮರಾಜನಗರ: ಕೆಜೆಪಿ ಪ್ರಧಾನ ಕಾರ್ಯದರ್ಶಿ ಎಂ.ಡಿ.ಲಕ್ಷ್ಮೀನಾರಾಯಣ ಮತ್ತು ವಿಧಾನ ಪರಿಷತ್ ಸದಸ್ಯ ಪ್ರೊ. ಕೆ.ಆರ್. ಮಲ್ಲಿಕಾರ್ಜುನಪ್ಪ ಅವರು ಮಾ.2ರಂದು ಚುನಾವಣಾ ಪ್ರಚಾರಕ್ಕಾಗಿ ಜಿಲ್ಲೆಗೆ ಆಗಮಿಸಲಿದ್ದಾರೆ. ಬೆಳಗ್ಗೆ 10.30ಕ್ಕೆ ಚಾಮರಾಜನಗರ, 11.30ಕ್ಕೆ ಯಳಂದೂರು, 2.30ಕ್ಕೆ ಕೊಳ್ಳೇಗಾಲ, ಸಂಜೆ 4 ಗಂಟೆಗೆ ಹನೂರಿಗೆ ಆಗಮಿಸಿ ಚುನಾವಣಾ ಪ್ರಚಾರ ಮಾಡಲಿದ್ದಾರೆ.
ಕೆಜೆಪಿಗೆ ಕೆಪಿಎಂ ನೇಮಕ
ಚಾಮರಾಜನಗರ: ಕೆಜೆಪಿ ಜಿಲ್ಲಾ ಸಂಚಾಲಕರಾಗಿ ಜಿಪಂ ಮಾಜಿ ಸದಸ್ಯ ಕೆ.ಪಿ. ಮಹದೇವಸ್ವಾಮಿ ಅವರನ್ನು ರಾಜ್ಯಾಧ್ಯಕ್ಷರ ಆದೇಶದ ಮೇರೆಗೆ ನೇಮಿಸಿ ರಾಜ್ಯ ಕಾರ್ಯದರ್ಶಿ ಎನ್.ವಿ.ಫಣೀಶ್ ಆದೇಶ ಹೊರಡಿಸಿದ್ದಾರೆ.
ಇಂದು ಹಿರೇಮಠ್ ತಂಡ ನಗರಕ್ಕೆ
ಚಾಮರಾಜನಗರ: ಸಮಾಜ ಪರಿವರ್ತನ ಸಮುದಾಯದ ಎಸ್.ಆರ್. ಹಿರೇಮಠ್ ಮತ್ತು ತಂಡವು ಮಾ.2ರಂದು ಬೆಳಗ್ಗೆ 11 ಗಂಟೆಗೆ ನಗರದ ಅಗ್ರಹಾರ ಬೀದಿಯಲ್ಲಿರುವ ಸ್ಪೂರ್ತಿ ಇನ್ಸ್‌ಟಿಟ್ಯೂಟ್‌ಗೆ ಭೇಟಿ ನೀಡಲಿದ್ದಾರೆ. ಅಲ್ಲಿ ಪೂರ್ವಭಾವಿ ಸಭೆ ನಡೆಯಲಿದ್ದು, ಸಮಾನ ಮನಸ್ಕರು ಸಭೆಗೆ ಆಗಮಿಸಬೇಕೆಂದು ಪ್ರಕಟಣೆಯಲ್ಲಿ ಕೋರಲಾಗಿದೆ.
ನಾಳೆ ಸಾಮೂಹಿಕ ಲಿಂಗಧಾರಣೆ
ಕೊಳ್ಳೇಗಾಲ: ಮಾ.3ರಂದು ಹೊಂಡರಬಾಳು ಶಂಕಿನ ಮಠದಲ್ಲಿ ಹರಗುರು ಚರಮೂರ್ತಿಗಳ ಸಾನಿಧ್ಯದಲ್ಲಿ ವೀರಶೈವ ವಟುಗಳಿಗೆ ಲಿಂಗಧಾರಣ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ವೀರಶೈವ ವಟುಗಳಿಗೆ ಹೊಂಡರಬಾಳು ಶಂಕಿನ ಮಠದ ನೀಲಕಂಠಶಿವಾಚಾರ್ಯಸ್ವಾಮೀಜಿ ಲಿಂಗಧಾರಣೆ ನೆರವೇರಿಸುವರು. ಕಾಯಕಶ್ರೀ ಡಾ. ಶಿವರುದ್ರಸ್ವಾಮಿ, ಆಡಿಟರ್ ಪಶುಪತಿ ಸೇರಿದಂತೆ ಹಲವು ಗಣ್ಯರು ಭಾಗವಹಿಸುವರು ಎಂದು ಬಸವ ಸೇವಾ ಪತ್ತಿನ ಸಹಕಾರ ಸಂಘ ಪ್ರಕಟಣೆಯಲ್ಲಿ ತಿಳಿಸಿದೆ.
ಹಿತಚಿಂತನಾ ದಿನಾಚರಣೆ
ಕೊಳ್ಳೇಗಾಲ: ನಗರದ ಚೌಡೇಶ್ವರಿ ಪ್ರಾಥಮಿಕ ಶಾಲೆಯಲ್ಲಿ ಲಾರ್ಡ್ ಬೇಡನ್ ಪೊವೆಲ್ ಅವರ ಹಿತಚಿಂತನಾ ದಿನಾಚರಣೆಯನ್ನು ಸಂಭ್ರಮ ಸಡಗರದಿಂದ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಶಿಕ್ಷಕ ಸೋಮಣ್ಣ ಮಾತನಾಡಿ, ವಿದ್ಯಾರ್ಥಿ ದೆಸೆಯಲ್ಲೇ ಮಕ್ಕಳು ಸಹಜೀವನ, ಸಹಬಾಳ್ವೆ  ಮಾಡುವ ಪರಿಯನ್ನು ಬೆಳೆಸಿಕೊಳ್ಳಬೇಕು ಹಾಗೂ ನಾವೆಲ್ಲರೂ ಒಂದೇ ಎಂಬ ಭಾವನೆ ತಳೆದು, ಶಿಸ್ತುಬದ್ಧರಾಗಿ ದೇಶ ಪ್ರೇಮಿಗಳಾಗಿ ರೂಪುಗೊಳ್ಳಬೇಕು ಎಂದು ಕರೆ ನೀಡಿದರು. ಜಯಶಂಕರ್, ರವಿಕುಮಾರ, ಸರೋಜಮ್ಮ, ರಾಜೇಶ್ವರಿ, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments