ಡಿಸಿ ಭೇಟಿ: ಪರಿಶೀಲನೆ
ಗುಂಡ್ಲುಪೇಟೆ: ಪಟ್ಟಣದ ಹೊರವಲಯದಲ್ಲಿರುವ ಪರಿಶಿಷ್ಟ ಜಾತಿ ವರ್ಗ, ಹಿಂದುಳಿದ ಹಾಗೂ ಗಿರಿಜನ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಜಿಲ್ಲಾಧಿಕಾರಿ ಎಂ.ವಿ.ಸಾವಿತ್ರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿದ್ಯಾರ್ಥಿ ನಿಲಯಗಳಲ್ಲಿ ಸ್ವಚ್ಛತೆ ಇಲ್ಲದ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಅವರು, ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು. ವಿದ್ಯಾರ್ಥಿ ನಿಲಯಗಳಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ನಿಗಾ ವಹಿಸುವಂತೆ ತಾಪಂ ಕಾರ್ಯ ನಿರ್ವಹಣಾಧಿಕಾರಿ ಶಿವಪ್ರಸಾದ್ರಿಗೆ ಸೂಚನೆ ನೀಡಿದರು.
ತಹಸೀಲ್ದಾರ್ ಎನ್.ಎಸ್.ಚಿದಾನಂದ, ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಕನ್ಯಾಕುಮಾರಿ ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.