ಅರ್ಧ ಕೆಜಿ ಗಾಂಜಾ ವಶ, ವ್ಯಕ್ತಿ ಸೆರೆ
ಗೋಣಿಕೊಪ್ಪಲು: ಗೋಣಿಕೊಪ್ಪಲು ನಗರ ಮಧ್ಯ ಭಾಗದಲ್ಲಿಯೇ ಮಾರುತಿ ಓಮ್ನಿ ವ್ಯಾನ್ನಲ್ಲಿ ಸುಮಾರು 500 ಗ್ರಾಂ ಗಾಂಜಾ ಮಾರಾಟ ಯತ್ನದಲ್ಲಿದ್ದ ಬೆಸಗೂರು ನಿವಾಸಿ ರಾಜಪ್ಪ ಎಂಬಾತನನ್ನು ಗೋಣಿಕೊಪ್ಪಲು ಪೊಲೀಸರು ಭಾನುವಾರ ಬಂಧಿಸಿದ್ದಾರೆ. 15 ಸಾವಿರ ಮೌಲ್ಯದ ಗಾಂಜಾ ಹಾಗೂ ಮಾರುತಿ ವ್ಯಾನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಧ್ಯಾಹ್ನ 1.45ರ ಸುಮಾರಿಗೆ ಇಲ್ಲಿನ ಬಸ್ ನಿಲ್ದಾಣದ ಮೂಲಕ ತರಕಾರಿ ಮಾರುಕಟ್ಟೆಗೆ ಸಾಗುವ ಹಾದಿಯಲ್ಲಿ ರಾಜಪ್ಪ ಎಂಬಾತ ವ್ಯಾನ್ನಲ್ಲಿ ಕುಳಿತು ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಎನ್ನಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.