ಉದ್ದಿಮೆ ಪರವಾನಗಿ ಪಡೆಯಲು ಸೂಚನೆ
ಗುಂಡ್ಲುಪೇಟೆ: ಪುರಸಭೆ ವ್ಯಾಪ್ತಿಯಲ್ಲಿ ಬರುವ ಹೊಟೇಲ್, ಬೇಕರಿ, ವಸತಿಗೃಹ, ಬಾರ್ ಮತ್ತು ರೆಸ್ಟೋರೆಂಟ್, ಅಂಗಡಿ ಮುಂಗಟ್ಟುಗಳು, ಎಲ್ಲ ಬಗೆಯ ಉದ್ದಿಮೆದಾರರು ಕಡ್ಡಾಯವಾಗಿ ಉದ್ದಿಮೆ ಪರವಾನಗಿ ಪಡೆಯುವಂತೆ ಪುರಸಭೆ ಸೂಚಿಸಿದೆ. ಈಗಾಗಲೇ ಪರವಾನಗಿ ಹೊಂದಿರುವವರು ವಾರದೊಳಗೆ ನವೀಕರಿಸಿಕೊಳ್ಳಬೇಕು. ಪುರಸಭೆ ವತಿಯಿಂದ ಉದ್ದಿಮೆ, ಅಂಗಡಿ ಮುಂಗಟ್ಟುಗಳ ತಪಾಸಣೆ ನಡೆಸಲಾಗುತ್ತದೆ. ಈ ವೇಳೆ ಪರವಾನಗಿ ಇಲ್ಲದಿರುವುದು ಕಂಡುಬಂದಲ್ಲಿ ಪ್ರಕರಣ ದಾಖಲಿಸಲಾಗುವುದೆಂದು ಆಡಳಿತಾಧಿಕಾರಿ ಗಿರೀಶ್ಬಾಬು ಹಾಗೂ ಮುಖ್ಯಾಧಿಕಾರಿ ಕರಿಬಸವಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
5ರಿಂದ ಬಹಿರಂಗ ಪ್ರಚಾರಕ್ಕೆ ಅಂತ್ಯ
ಚಾಮರಾಜನಗರ: ನಗರಸಭೆ, ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಮತದಾನ ಪ್ರಾರಂಭ ದಿನದ ಹಿಂದಿನ 48 ಗಂಟೆಗಳ ಅವಧಿಯಲ್ಲಿ ರಾಜಕೀಯ ಪಕ್ಷ, ಅಭ್ಯರ್ಥಿ ಅಥವಾ ಅವರ ಬೆಂಬಲಿಗರು ಬಹಿರಂಗ ಪ್ರಚಾರ ಅಂತ್ಯಗೊಳಿಸಬೇಕು ಎಂದು ರಾಜ್ಯ ಚುನಾವಣೆ ಆಯೋಗ ಆದೇಶಿಸಿದೆ. ಮತದಾನ ಆರಂಭವಾಗುವ 48 ಗಂಟೆ ಮುನ್ನ ಚುನಾವಣಾ ಸಂಬಂಧಿಸಿದ ಸಾರ್ವಜನಿಕ ಸಭೆ, ಸಮಾರಂಭ ನಡೆಸತಕ್ಕದಲ್ಲ. ಅಲ್ಲದೆ ಮತದಾರರಿಗೆ ಮೊಬೈಲ್ ಮೂಲಕ ಎಸ್ಎಂಎಸ್, ರೇಡಿಯೋ, ಟಿವಿ ಚಾನಲ್, ವಿಡಿಯೋ ಕ್ಲಿಪ್ಪಿಂಗ್ ಪ್ರದರ್ಶನ ಹಾಗೂ ಪತ್ರಿಕೆಗಳಲ್ಲಿ ಜಾಹೀರಾತು ಹೊರಡಿಸುವಂತಿಲ್ಲ. ಈ ನಿಯಮಗಳನ್ನು ಉಲ್ಲಂಘಿಸಿದವರು ಕಾನೂನಿನಡಿಯಲ್ಲಿ ಶಿಕ್ಷೆಗೆ ಅರ್ಹರಾಗಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.