ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಾಮರಾಜನಗರ

ಕಾಂಗ್ರೆಸ್ ಅಭ್ಯರ್ಥಿ ಸೋಲಿಸಲು ಬಿಜೆಪಿ, ಬಿಎಸ್ಪಿ ಜಂಟಿ ಪ್ರಚಾರ

Parashurama
Updated On : 3 Mar 2013, 11:34 am

ಕೊಳ್ಳೇಗಾಲ: “OÛMVæÃÑé ಅಭ್ಯರ್ಥಿ ಸೋಲಿಸಿ, ಪಕ್ಷೇತರ ಅಭ್ಯರ್ಥಿ VæÆÇÒ’ ಎಂದು ಕೊಳ್ಳೇಗಾಲ ಶಾಸಕ ಜಿ.ಎನ್.ನಂಜುಂಡಸ್ವಾಮಿ ಹಾಗೂ ಬಿಎಸ್ಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಮುಡಿಗುಂಡದಲ್ಲಿ ಭಾನುವಾರ ಜಂಟಿ ಚುನಾವಣಾ ಪ್ರಚಾರ ನಡೆಸಿದರು.
ಬೆಳಗ್ಗೆ 8 ಗಂಟೆ ವೇಳೆಗೆ ಆದಿಶಕ್ತಿ ಮುಳ್ಳಾಚಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಜಿ.ಎನ್.ನಂಜುಂಡಸ್ವಾಮಿ, ಬಿಎಸ್ಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಅವರು ಕಾರ್ಯಕರ್ತರು ಹಾಗೂ ವಾರ್ಡ್  ನಿವಾಸಿಗಳ ನೇತೃತ್ವದಲ್ಲಿ ಜಂಟಿಯಾಗಿ ಸುಮಾರು 2 ಗಂಟೆಗಳ ಕಾಲ ಚುನಾವಣಾ ಪ್ರಚಾರ ನಡೆಸಿದರು. ಇಬ್ಬರು ಮುಖಂಡರೂ ಅಭಿವೃದ್ಧಿಗಾಗಿ ಪಕ್ಷೇತರ ಅಭ್ಯರ್ಥಿ ಬೆಂಬಲಿಸಿ ಎಂದು ಮನೆ ಮನೆಗೆ ತೆರಳಿ ಮತ ಯಾಚಿಸಿದರು.  
ದುರ್ನಡತೆಗೆ ತಕ್ಕ ಪಾಠ: ಪ್ರಚಾರದ ಸಂದರ್ಭದಲ್ಲಿ ಮಾತನಾಡಿದ ಶಾಸಕ ಜಿ.ಎನ್.ನಂಜುಂಡಸ್ವಾಮಿ, ಈ ವಾರ್ಡ್‌ನ ಕಾಂಗ್ರೆಸ್ ಅಭ್ಯರ್ಥಿ ದುರ್ನಡತೆ ರೂಢಿಸಿಕೊಂಡಿದ್ದಾರೆ. ಈ ವಾರ್ಡಿಗೆ ನಮ್ಮ ಪಕ್ಷದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಬಹುದಿತ್ತು. ಇಲ್ಲಿನ ವಾರ್ಡ್ ನಿವಾಸಿಗಳ ಮನವಿಯಂತೆ ನಾವು ಅಭ್ಯರ್ಥಿ ಹಾಕಲಿಲ್ಲ. ದುರ್ನಡತೆ ಹಾಗೂ ಉತ್ತಮ ವ್ಯಕ್ತಿತ್ವದ ನಡುವೆ ನಡೆಯುವ ಚುನಾವಣೆ ಇದಾಗಿದ್ದು, ಇಲ್ಲಿನ ಮತದಾರರು ಪಕ್ಷೇತರ ಅಭ್ಯರ್ಥಿಗೆ ಬೆಂಬಲ ಸೂಚಿಸಲಿದ್ದಾರೆ ಎಂದರು.
ಪಕ್ಷೇತರ ಅಭ್ಯರ್ಥಿಗೆ ಬಂಬಲ: ಬಹುಜನ ಸಮಾಜ ಪಾರ್ಟಿಯ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಮಾತನಾಡಿ, ಸ್ಥಳೀಯ ಸಂಸ್ಥೆಗಳಲ್ಲಿ ಬಿಎಸ್ಪಿ ವರಿಷ್ಠರ ಸೂಚನೆ ದೊರಕದ ಕಾರಣ ಅಭ್ಯರ್ಥಿಯನ್ನು ಹಾಕಿಲ್ಲ. ಜೆಡಿಎಸ್‌ನಿಂದಲೂ ಅಭ್ಯರ್ಥಿಯನ್ನು ಹಾಕದೇ ಎಸ್. ಬಾಲರಾಜು ಸಹ ಬೆಂಬಲ ಸೂಚಿಸಿದ್ದಾರೆ. ಶಾಸಕ ಜಿ.ಎನ್.ನಂಜುಂಡಸ್ವಾಮಿ ಸಹಾ ಬಿಜೆಪಿ ಅಭ್ಯರ್ಥಿ ಹಾಕದೆ ಜಂಟಿ ಪ್ರಚಾರಕ್ಕೆ ಆಗಮಿಸಿದ್ದಾರೆ. ಇಲ್ಲಿನ ಪಕ್ಷೇತರ ಅಭ್ಯರ್ಥಿಗೆ ಮತದಾರರ ಆಶೀರ್ವಾದವಿದ್ದು, ಗೆಲವು ಖಚಿತ ಎಂದರು.
ಈ ಸಂದರ್ಭದಲ್ಲಿ ಪಕ್ಷೇತರ ಅಭ್ಯರ್ಥಿ ರಂಗಸ್ವಾಮಿ, ಮುಡಿಗುಂಡಮೂರ್ತಿ, ವಿರೂಪಾಕ್ಷ, ಉದಯ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments