ಬಂಡೀಪುರದಲ್ಲಿ ಹೆಣ್ಣಾನೆ ಸಾವು
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಹುಲಿ ರಕ್ಷಿತಾರಣ್ಯದಲ್ಲಿ ಹೆಣ್ಣಾನೆಯೊಂದು ಸ್ವಾಭಾವಿಕವಾಗಿ ಸಾವಿಗೀಡಾದ ಪ್ರಕರಣ ಭಾನುವಾರ ಬೆಳಕಿಗೆ ಬಂದಿದೆ. ಬಂಡೀಪುರ ಅರಣ್ಯದ ಗೋಪಾಲಸ್ವಾಮಿ ಬೆಟ್ಟದ ವಲಯದಲ್ಲಿ ಸುಮಾರು 40 ವರ್ಷದ ಹೆಣ್ಣಾನೆ ಶವ ಹಿರೇ ಕೆರೆಯ ಹಿಂಭಾಗ ಬಿದ್ದಿರುವುದು ಭಾನುವಾರ ಬೆಳಗ್ಗೆ ಅರಣ್ಯ ಇಲಾಖೆ ಸಿಬ್ಬಂದಿ ಕಣ್ಣಿಗೆ ಬಿದ್ದಿದೆ. ವಯಸ್ಸಾಗಿರುವ ಕಾರಣ ಹೆಣ್ಣಾನೆ ಮೃತಪಟ್ಟಿದೆ ಎಂದು ಗೋಪಾಲಸ್ವಾಮಿ ಬೆಟ್ಟದ ವಲಯ ಅರಣ್ಯಾಧಿಕಾರಿ ಶಶಿಧರ್ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.