ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಾಮರಾಜನಗರ

ಚಾಮರಾಜನಗರದಲ್ಲಿ 24ಕ್ಕೆ ಕೆಜೆಪಿ ಸಮಾವೇಶ

Parashurama
Updated On : 19 Mar 2013, 10:29 am

ಕ.ಪ್ರ.ವಾರ್ತೆ ್ಣ ಚಾಮರಾಜನಗರ ್ಣ ಮಾ.19
ಚಾಮರಾಜನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಮಾ.24 ರಂದು ಕೆಜೆಪಿ ಸಮಾವೇಶ ಏರ್ಪಡಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ ಪ್ರೊ. ಕೆ.ಆರ್. ಮಲ್ಲಿಕಾರ್ಜುನಪ್ಪ ತಿಳಿಸಿದರು.
ಕೆಜೆಪಿ ಸಮಾವೇಶಕ್ಕೆ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಹಿರಿಯ ಮುಖಂಡರಾದ ಕೆ.ಎಚ್. ಶ್ರೀನಿವಾಸ್, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಮುಕುಡಪ್ಪ ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಲಿದ್ದಾರೆ ಎಂದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕೆಜೆಪಿ ಸಮಾವೇಶದಲ್ಲಿ ನನ್ನೊಂದಿಗೆ ಜಿಪಂ ಸದಸ್ಯೆ ಸರಸಮ್ಮ, ತಾಪಂ ಸದಸ್ಯರಾದ ಮಾದಪ್ಪ, ಕಾಂತಮಣಿ,  ನಾಗರಾಜು, ಜಡೇಸ್ವಾಮಿ, ಲೋಕೇಶ್, ಚಿಕ್ಕಮಹದೇವಶೆಟ್ಟಿ, ರಾಣಿ ನಟರಾಜು, ಎಪಿಎಂಸಿ ಮಾಜಿ ಅಧ್ಯಕ್ಷ ತೀಥೇರ್ಶ್, ಟಿಎಪಿಸಿಎಂಎಸ್ ಅಧ್ಯಕ್ಷ ಬಸವಣ್ಣ, ಹಾಪ್‌ಕಾಮ್ಸ್ ನಿರ್ದೇಶಕರು, ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಸೇರಿದಂತೆ ಸಾವಿರಾರು ಮಂದಿ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದರು.
ಅಧಿಕಾರ ಹಿಡಿಯಲು ಪ್ರಮಾಣಿಕ ಪ್ರಯತ್ನ:  ಚಾಮರಾಜನಗರ ನಗರಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಅಲ್ಪಾವಧಿಯಲ್ಲೇ ಹೆಚ್ಚಿನ ಸ್ಥಾನ ನೀಡಿದೆ. ಈ ಹಿನ್ನೆಲೆಯಲ್ಲಿ ನಗರಸಭೆ ಅಧಿಕಾರ ಹಿಡಿಯಲು ಪ್ರಮಾಣಿಕ ಪ್ರಯತ್ನ ಮಾಡಲಾಗುವುದು. ಕೆಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಸಹ ಸ್ಧಳೀಯ ಸನ್ನಿವೇಶಗಳಿಗೆ ಅನುಕೂಲ ಆಗುವಂತೆ ಹೊಂದಾಣಿಕೆ ಮಾಡಿಕೊಂಡು ಅಧಿಕಾರ ಹಿಡಿಯಿರಿ ಎಂದು ಹೇಳಿದ್ದಾರೆ. ಈ  ಹಿನ್ನೆಲೆ ನಾನು ಅಧಿಕಾರ ಹಿಡಿಯಲು ಇತರೆ ಸದಸ್ಯರ ಜೊತೆ ಸಂಪರ್ಕದಲ್ಲಿದ್ದೇವೆ ಎಂದರು.
ಸೋಮಣ್ಣಗೆ ಸ್ವಾಗತ:  ಸಚಿವ ವಿ.ಸೋಮಣ್ಣ ಅವರನ್ನು ಪಕ್ಷಕ್ಕೆ ಕರೆತರುವ ನಿಟ್ಟಿನಲ್ಲಿ ಮಾತುಕತೆ ನಡೆಯುತ್ತಿದೆ. ಏ. 2ರ ಬಳಿಕ ನಿರ್ಧಾರ ತಿಳಿಸುವುದಾಗಿ ಹೇಳಿದ್ದಾರೆ. ಅವರು ಪಕ್ಷಕ್ಕೆ ಸೇರ್ಪಡೆಯಾದರೆ ಅವರನ್ನು ಸ್ವಾಗತಿಸುವುದಾಗಿ ಮಲ್ಲಿಕಾರ್ಜುನಪ್ಪ ಅವರು ತಿಳಿಸಿದರು.
ಜಿಲ್ಲಾ ಸಂಚಾಲಕ ಕೆ.ಪಿ. ಮಹದೇವಸ್ವಾಮಿ, ನಗರ ಘಟಕದ ಅಧ್ಯಕ್ಷ ನಾಗರಾಜು, ಗ್ರಾಮಾಂತರ ಅಧ್ಯಕ್ಷ ಗೋವಿಂದಶೆಟ್ಟಿ, ರಾಜಗೋಪಾಲ್, ಪು.ಶ್ರೀನಿವಾಸ ನಾಯಕ, ನಗರಸಭಾ ಸದಸ್ಯರಾದ ವೈ.ಸಿ. ಲೋಕೇಶ್, ವಿಜಯಕುಮಾರಿ, ಎಂ.ರಾಜಶೇಖರಮೂರ್ತಿ, ಗ್ರಾಪಂ ಸದಸ್ಯ ಗಿರೀಶ್ ದೊಡ್ಡರಾಯ ಪೇಟೆ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments