ಇಂದು ಬಿಜೆಪಿ ಸಮಾವೇಶ
ಚಾಮರಾಜನಗರ: ಜಿಲ್ಲಾ ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶವು ಮಾ.22ರ ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ನಡೆಯಲಿದ್ದು, ಸಮಾವೇಶದಲ್ಲಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಭಾಗವಹಿಸಲಿದ್ದಾರೆ.
ಜೊತೆಗೆ ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತಕುಮಾರ್, ಮಾಜಿ ಮುಖ್ಯಮಂತ್ರಿ ಸದಾನಂದಗೌಡ, ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ನಿಗಮ ಮಂಡಳಿಗಳ ಅಧ್ಯಕ್ಷರು, ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕರ್ತರು ಉತ್ಸಾಹದಿಂದ ಪಾಲ್ಗೊಳ್ಳಬೇಕೆಂದು ಎಂದು ಜಿಲ್ಲಾ ಬಿಜೆಪಿ ಮಾಧ್ಯಮ ಪ್ರಮುಖ ರ. ನಾರಾಯಣಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.