ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಾಮರಾಜನಗರ

ಕಾಯಂ ಪಡಿತರ ಚೀಟಿ ಪಡೆಯಿರಿ

Parashurama
Updated On : 21 Mar 2013, 10:42 am

ಚಾಮರಾಜನಗರ: ತಾತ್ಕಾಲಿಕ ಪಡಿತರ ಚೀಟಿಯಿಂದ ಕಾಯಂ ಪಡಿತರ ಚೀಟಿಗಾಗಿ ಭಾವಚಿತ್ರ ಹಾಗೂ ಬಯೋವುಟ್ರಿಕ್ ನೀಡಿ, ಪಡಿತರ ಚೀಟಿ ಸಿದ್ಧವಿದ್ದರೂ ಇದುವರೆಗೆ ಪಡೆದುಕೊಳ್ಳದೇ ಇರುವ ಪಡಿತರ ಚೀಟಿದಾರರಿಗೆ ಆಹಾರಧಾನ್ಯ ಹಾಗೂ ಸೀಮೆಎಣ್ಣೆ ಹಂಚಿಕೆ ನಿಲ್ಲಿಸಲಾಗುವುದೆಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಸೂಚಿಸಿದೆ. ಖಾಯಂ ಪಡಿತರ ಚೀಟಿಗಳನ್ನು ನಗರ ಪ್ರದೇಶದ ಜನತೆ ಮಾರ್ಚ್ ಒಳಗೆ ಪಡೆಯಬೇಕು. ಗ್ರಾಮಾಂತರ ಪ್ರದೇಶದಲ್ಲಿ ಏಪ್ರಿಲ್ ಒಳಗೆ ಪಡಿತರ ಚೀಟಿಗಳನ್ನು ಪಡೆದುಕೊಳ್ಳಬೇಕು. ಆಯಾ ತಾಲೂಕು ಕಚೇರಿ ಅಥವಾ ಗ್ರಾಪಂ ಕಚೇರಿಗಳಲ್ಲಿ ಪಡಿತರ ಚೀಟಿ ನೀಡಲಾಗುವುದು. ಪಡಿತರ ಚೀಟಿ ಪಡೆಯದ ನಗರ ಪ್ರದೇಶದ ಕಾರ್ಡ್‌ದಾರರಿಗೆ ಮಾರ್ಚ್‌ನಲ್ಲಿ, ಗ್ರಾಮಾಂತರ ಪ್ರದೇಶದ ಕಾರ್ಡ್‌ದಾರರಿಗೆ ಏಪ್ರಿಲ್‌ನಿಂದ ಪಡಿತರ ಹಂಚಿಕೆ ನಿಲ್ಲಿಸಲಾಗುವುದು. ಅಲ್ಲದೆ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗುವುದು ಎಂದು ಇಲಾಖೆಯ ಉಪನಿರ್ದೇಶಕರಾದ ಸಂಬಯ್ಯ ತಿಳಿಸಿದ್ದಾರೆ. ಅರ್ಹ ಫಲಾನುಭವಿಗಳನ್ನು ಗುರುತಿಸುವ ಸಲುವಾಗಿ ನಗರ ಪಟ್ಟಣ ಪ್ರದೇಶಗಳಲ್ಲಿ ಈ ಮಾರ್ಚ್‌ನಿಂದಲೇ ಕಡ್ಡಾಯವಾಗಿ ಖಾಯಂ ಪಡಿತರ ಚೀಟಿಗಳಿಗೆ ಮಾತ್ರ ಆಹಾರ ಧಾನ್ಯ ಮತ್ತು ಸೀಮೆಎಣ್ಣೆ ಹಂಚಿಕೆ ನೀಡುವಂತೆ ನ್ಯಾಯಬೆಲೆ ಅಂಗಡಿಗಳಿಗೆ ಸೂಚಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments