ಮತದಾನ ಜಾಗೃತಿ ಅಭಿಯಾನ:ಸಿದ್ಧತೆಗೆ ಸೂಚನೆ
ಕ.ಪ್ರ.ವಾರ್ತೆ ಚಾ.ನಗರ ಮಾ.25
ಮತದಾನ ಪ್ರಕ್ರಿಯೆಯಲ್ಲಿ ಮತದಾರರು ಪಾಲ್ಗೊಳ್ಳುವಂತಾಗಲು ಮತದಾನ ಹಕ್ಕು ಜಾಗೃತಿ ಅಭಿಯಾನ ಸಮಿತಿಯ ಸದಸ್ಯರಿಗೆ ಕ್ರಿಯಾಯೋಜನೆ ಸಿದ್ಧಪಡಿಸಲು ಮತದಾನ ಹಕ್ಕು ಜಾಗೃತಿ ಅಭಿಯಾನದ ಅಧ್ಯಕ್ಷರು, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಆರ್.ಸೋಮಶೇಖರಪ್ಪ ತಿಳಿಸಿದರು.
ನಗರದ ಜಿಪಂ ಸ್ಥಾಯಿ ಸಮಿತಿ ಸಭಾಂಗಣದಲ್ಲಿ ನಡೆದ ಮತದಾನ ಹಕ್ಕು ಜಾಗೃತಿ ಅಭಿಯಾನದ ಅವರು ಮಾತನಾಡಿದರು. ಸಮಿತಿಯ ಸದಸ್ಯರಿಗೆ ತಮ್ಮ ಇಲಾಖೆಯ ಮೂಲಕ ಮತದಾನದ ಮಹತ್ವದ ಬಗ್ಗೆ ಪರಿಣಾಮಕಾರಿ ಕಾರ್ಯಕ್ರಮ ಮಾಡಲು ಸಿದ್ಧತೆ ಮಾಡಿಕೊಳ್ಳಬೇಕು. ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಅರಿವು ಮೂಡಿಸಬೇಕು. ಪ್ರಮುಖರ ಹೆಸರು ಪಟ್ಟಿಯಲ್ಲಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಈ ಸಂಬಂಧ ಜಾಗೃತಿ ಅಭಿಯಾನ ಹಮ್ಮಿಕೊಳ್ಳಬೇಕು ಎಂದರು. ಅಭಿಯಾನದ ಸದಸ್ಯರಾದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ರಮೇಶ್‌ಬಾಬು, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿದ್ದದೇವರು, ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಪ್ರಕಾಶ್ ಇದ್ದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.