ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಾಮರಾಜನಗರ

ಸ್ವೀಪ್: ಪ್ರಾಂಶುಪಾಲರ ಸಭೆ

Parashurama
Updated On : 25 Mar 2013, 10:56 am

ಕ.ಪ್ರ.ವಾರ್ತೆ ಚಾ.ನಗರ  ಮಾ.25
ರಾಜ್ಯದಲ್ಲಿ ನಡೆಯುತ್ತಿರುವ ಚುನಾವಣೆಗಳಲ್ಲಿ  ಮತದಾನ ಚಲಾವಣೆ ಪ್ರಮಾಣ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಸಾರ್ವಜನಿಕರಿಗೆ ಜಾಗೃತಗೊಳಿಸಲು ವಿಶಿಷ್ಟವಾದ ವ್ಯವಸ್ಥಿತ ಶಿಕ್ಷಣ ಹಾಗೂ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಿಕೆ (ಸ್ವೀಪ್) ಕಾರ್ಯಕ್ರಮ ರೂಪಿಸಿದೆ ಎಂದು ಜಿಪಂ ಸಿಇಒ ಎಂ.ಆರ್.ಸೋಮಶೇಖರಪ್ಪ ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜಿಪಂ ಸ್ಥಾಯಿ ಸಮಿತಿ ಸಭಾಂಗಣದಲ್ಲಿ ಸೋಮವಾರ   ಸ್ವೀಪ್ ಕಾರ್ಯಕ್ರಮ ಕುರಿತು ಕರೆದಿದ್ದ ಜಿಲ್ಲೆಯ ವಿವಿಧ ಕಾಲೇಜುಗಳ ಪ್ರಾಂಶುಪಾಲರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮತದಾರರು ತಪ್ಪದೆ ತಮ್ಮ ಮತದಾನದ ಹಕ್ಕು ಚಲಾಯಿಸಬೇಕು ಎನ್ನುವ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಜಿಲ್ಲೆಯ ಕಾಲೇಜುಗಳಲ್ಲಿ ಹಮ್ಮಿಕೊಳ್ಳಬೇಕು. ಭಾಷಣ ಸ್ಪರ್ಧೆ, ಸಂವಾದ ಕಾರ್ಯಕ್ರಮ, ಜಾಥಾ ಸೇರಿದಂತೆ ಹಲವು ಕಾರ್ಯಕ್ರಮ ನಡೆಸಲು ವ್ಯವಸ್ಥೆ ಮಾಡಬೇಕು ಎಂದರು.
ಸರ್ಕಾರ ರಚನೆಗೆ ಚುನಾವಣೆ ಪ್ರಕ್ರಿಯೆ ಪ್ರಮುಖವಾಗಿದ್ದು, ಮತದಾರರು ಅದನ್ನು ಚಲಾಯಿಸುವ ಮೂಲಕ ತಮ್ಮ ಕರ್ತವ್ಯ ನಿರ್ವಹಿಸಬೇಕಾಗಿದೆ. ನಮ್ಮ ಒಂದು ಮತದಿಂದ ಯಾವುದೇ ಪರಿಣಾಮ ಸಾಧ್ಯವಿಲ್ಲ ಎಂಬ ಮತದಾರರ ನಿರ್ಲಕ್ಷ್ಯ ಮನೋಭಾವ ಬದಲಾಗಬೇಕಿದೆ ಎಂದರು.  
ಮತದಾರರಲ್ಲಿ ಅರಿವು ಮೂಡಿಸಲು ಆಯಾ ಭಾಗದ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸ್ವಯಂ ಸೇವಾ ಸಂಸ್ಥೆಗಳು ಸೇವಾ ಮನೋಭಾವದಿಂದ ಇದನ್ನು ಆಂದೋಲನ ಮಾದರಿಯಲ್ಲಿ ಜಾಗೃತಿ ಮೂಡಿಸಬೇಕಾದ ಕಾರ್ಯಕ್ರಮಗಳನ್ನು ಇತರೆ ಇಲಾಖೆಗಳ ವತಿಯಿಂದ ಆಯೋಜಿಸಲಾಗುವುದು ಎಂದು ತಿಳಿಸಿದರು.
ಪ್ರಸಕ್ತ ವಿಧಾನಸಭೆ ಚುನಾವಣೆಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೊಳಿಸಲು ಏ.7ರವರೆಗೂ ಕಾಲಾವಕಾಶವಿದೆ. 18 ವರ್ಷ ಮೇಲ್ಪಟ್ಟವರು, ಆಯಾ ಮತಗಟ್ಟೆ ಅಧಿಕಾರಿಗಳ ಬಳಿ ಲಭ್ಯವಿರುವ ನಮೂನೆ-6  ಅನ್ನು ಭರ್ತಿ ಮಾಡಿ ನೀಡಿದರಾಯಿತು. ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲಾಗುವುದು ಎಂದರು.  ಡಿಡಿಪಿಐ ಚಂದ್ರೇಗೌಡ, ಸ್ವೀಪ್ ಕಾರ್ಯಕ್ರಮದ ಜಿಲ್ಲಾ ನೋಡಲ್ ಅಧಿಕಾರಿ ಮಹೇಶ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ  ವಿವಿಧ ಕಾಲೇಜುಗಳ ಪ್ರಾಂಶುಪಾಲರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments