ಇಂದು ಕ್ಷಯರೋಗ ದಿನಾಚರಣೆ, ಜಾಥಾ
ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಮಾ.27ರಂದು ವಿಶ್ವ ಕ್ಷಯರೋಗ ದಿನಾಚರಣೆ ಆಚರಿಸಲಾಗುತ್ತದೆ. ತಾಲೂಕಿನ ಕುದೇರಿನ ರೇಷ್ಮೆ ಕೃಷಿ ತರಬೇತಿ ಕೇಂದ್ರದಲ್ಲಿ ಕಾರ್ಯಕ್ರವನ್ನು ಜಿಲ್ಲಾಧಿಕಾರಿ ಎಂ.ವಿ. ಸಾವಿತ್ರಿ ಉದ್ಘಾಟಿಸಲಿದ್ದಾರೆ. ಜಿಪಂ ಸಿಇಒ ಎಂ.ಆರ್. ಸೋಮಶೇಖರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.ಜಿಲ್ಲಾ ಮಲೇರಿಯಾ ನಿರ್ಮೂಲನಾಧಿಕಾರಿ ಎಂ.ಆರ್. ಹೇಮಕುಮಾರ್, ಜಿಲ್ಲಾ ಲಸಿಕಾಧಿಕಾರಿ ಡಾ.ಡಿ.ಗಿರಿಜಾಂಬ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ.ಬಸವರಾಜು, ತಾಲೂಕು ಆರೋಗ್ಯಾಧಿಕಾರಿ ಎನ್.ಗೋಪಾಲ್, ಮತ್ತಿರರು ಭಾಗವಹಿಸಲಿದ್ದಾರೆ. ಕ್ಷಯರೋಗ ಜಾಗೃತಿ ಜಾಥಾವನ್ನು ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಪ್ರಭುಸ್ವಾಮಿ ಉದ್ಘಾಟಿಸಲಿದ್ದಾರೆ.
ಇಂದು ರಥೋತ್ಸವ
ಯಳಂದೂರು: ಹೋಳಿ ಹುಣ್ಣಿಮೆ ಅಂಗವಾಗಿ ಪಟ್ಟಣದ ಭೂ ಲಕ್ಷ್ಮೀ ವರಹಸ್ವಾಮಿ ರಥೋತ್ಸವ ಮಾ.27 ಬುಧವಾರ ನಡೆಯಲಿದೆ. ಭೂಲಕ್ಷ್ಮೀ ವರಹಸ್ವಾಮಿಯನ್ನು ದೇವಾಲಯದ ಸುತ್ತಾ ಮೆರವಣಿಗೆ ಮಾಡಿದ ಬಳಿಕ ರಥೋತ್ಸವಕ್ಕೆ ಚಾಲನೆ ನೀಡಿ ಊರಿನ ಪ್ರಮುಖ ಬೀದಿಗಳಲ್ಲಿ ರಥೋತ್ಸವ ನಡೆಯಲಿದೆ. ರಥೋತ್ಸವ ಮುಗಿದ ಬಳಿಕ ಎಲ್ಲರೂ ಒಗ್ಗಟ್ಟಿನಿಂದ ಬಣ್ಣವನ್ನು ಒಬ್ಬರಿಗೊಬ್ಬರು ಎರಚುವ ಮೂಲಕ ಹೋಳಿ ಹಬ್ಬ ಆಚರಣೆ ಮಾಡಲಾಗುತ್ತದೆ. ಸಂಜೆ 7 ಗಂಟೆಗೆ ಜಹಗೀರ್ದಾರ್ ಬಂಗಲೆ ಅವರಣದಲ್ಲಿ ಕಾಮದಹನ ಮಾಡಲಾಗುತ್ತದೆ. ಈ ಸಂಬಂಧ ಅಲಂಕಾರ ಮಾಡಲಾಗಿದೆ. ಊರಿನ ಪ್ರಮುಖ ಬೀದಿಗಳಲ್ಲಿ ಹಸಿರು ತೋರಣಗಳಿಂದ ಶೃಂಗಾರ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.