ಚಂದ್ರಕಲಾಬಾಯಿಗೆ ಬಿಎಸ್ಸಾರ್ ಆಹ್ವಾನ
ಕೊಳ್ಳೇಗಾಲ: ಕೊಳ್ಳೇಗಾಲ ಮೀಸಲು ಕ್ಷೇತ್ರದಿಂದ ಕೆಜೆಪಿ ಟಿಕೆಟ್ ವಂಚಿತರಾಗಿ ಅಸಮಾಧಾನಗೊಂಡಿರುವ ಜಿಪಂ ಸದಸ್ಯೆ ಚಂದ್ರಕಲಾಬಾಯಿ ಅವರನ್ನು ಕೆಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಏ.2ರಂದು ತಮ್ಮನ್ನು ಭೇಟಿ ಮಾಡುವಂತೆ ಆಹ್ವಾನ ನೀಡಿದ್ದಾರೆ ಎಂದು ಚಂದ್ರಕಲಾಬಾಯಿ ಬೆಂಬಲಿಗರು ತಿಳಿಸಿದ್ದಾರೆ. ಈ ಮಧ್ಯೆ ಬಿಎಸ್ಸಾರ್ ಮುಖಂಡರು ಚಂದ್ರಕಲಾ ಅವರನ್ನು ಭೇಟಿ ಮಾಡಿ ಪಕ್ಷ ಸೇರ್ಪಡೆಗೆ ಆಹ್ವಾನಿಸಿ ಕೊಳ್ಳೇಗಾಲಕ್ಕೆ ಟಿಕೆಟ್ ನೀಡುವ ಬಗ್ಗೆ ಭರವಸೆ ನೀಡಿದ್ದಾರೆ. ಕೆಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಚಂದ್ರಕಲಾ ಅವರು ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಕೆಜೆಪಿಯಲ್ಲಿದ್ದುಕೊಂಡೆ ಬಂಡಾಯದ ಬಾವುಟ ಹಾರಿಸಿ ಪಕ್ಷೇತರವಾಗಿ ಸ್ಪರ್ಧಿಸಲು ಸಿದ್ಧತೆ ನಡೆಸುತ್ತಿದ್ದು, ಈ ಹಿನ್ನೆಲೆ ಬಂಡಾಯವಾಗಿ ಸ್ಪರ್ಧಿಸದಂತೆ ತಡೆಯಲು ಯಡಿಯೂರಪ್ಪ ಚಂದ್ರಕಲಾಬಾಯಿಗೆ ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ. ಈ ಮಧ್ಯೆ ಚಂದ್ರಕಲಾಗೆ ಬಿಎಸ್ಸಾರ್ನಿಂದ ಒತ್ತಡ ಹೆಚ್ಚಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.