ಚಾಮರಾಜನಗರ

ಮತದಾನ ಎಲ್ಲರ ಹಕ್ಕು

ಕ.ಪ್ರ.ವಾರ್ತೆ ್ಣ ಚಾ.ನಗರ ್ಣ ಮಾ.29
ಮತದಾನದ ಮಹತ್ವವನ್ನು ಎಲ್ಲರೂ ಅರಿಯಬೇಕು. ಜೊತೆಗೆ ಸರಿಯಾದ ವ್ಯಕ್ತಿ ಹಾಗೂ ಸರ್ಕಾರವನ್ನು ಆಯ್ಕೆ ಮಾಡುವ ಹಕ್ಕು ನಮ್ಮೆಲ್ಲರಿಗೂ ಇದೆ ಎಂದು ಕೊಳ್ಳೇಗಾಲ ಜೆಎಸ್‌ಎಸ್ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಎಚ್.ವಿ.ರವೀಶ್ ತಿಳಿಸಿದರು.
ಮತದಾರರ ಜಾಗೃತಿ ಆಂದೋಲನದ ಅಂಗವಾಗಿ ಕೊಳ್ಳೇಗಾಲ ಜೆಎಸ್‌ಎಸ್ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ಯುವ ಸಮುದಾಯವನ್ನು ಎಚ್ಚರಿಸುವ ಕಾರ್ಯಕ್ರಮ ಇದಾಗಬೇಕು. ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಸೇರಿಸಲು ಏ.7ರವರೆಗೆ ಅವಕಾಶವಿದ್ದು, ಯುವಜನರು ತಮ್ಮ ಹೆಸರನ್ನು ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ನೋಂದಾಯಿಸಿ ಚುನಾವಣೆಯಲ್ಲಿ ಮತ ಚಲಾಯಿಸಬೇಕು ಎಂದರು.
ಪ್ರಾಂಶುಪಾಲರ ಪ್ರೊ. ಎಂ.ಪಿ.ವಿಜಯೇಂದ್ರಕುಮಾರ್ ಮಾತನಾಡಿ, ಚುನಾವಣೆಯಲ್ಲಿ ಯುವಕರು ಮುಖ್ಯ ಪಾತ್ರ ವಹಿಸಲಿದ್ದು, ವಿಶ್ವದಲ್ಲೇ ಅತಿ ದೊಡ್ಡ ಪ್ರಜಾಪ್ರಭುತ್ವವನ್ನು ಹೊಂದಿರುವ ಭಾರತವನ್ನು ಬಲಪಡಿಸಲು ಯುವಕರು ಮುಂದಾಗಬೇಕು ಎಂದರು.  
ಮತದಾರರ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಕನ್ನಡ ಉಪನ್ಯಾಸಕ ಎ.ಎಂ.ಮಹದೇವಸ್ವಾಮಿ ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ಕರ್ನಾಟಕ ಸೇರಿ 5 ರಾಜ್ಯಗಳಿಗೆ 2 ದಿನಗಳಲ್ಲಿ ಭಾರೀ ಮಳೆ: IMD ಎಚ್ಚರಿಕೆ