ಬೈಲಕುಪ್ಪೆ: ಪಿರಿಯಾಪಟ್ಟಣ ತಾಲೂಕಿನ ಕಣಗಾಲು ಗ್ರಾಮದ ದಿಡ್ಡಿಯಮ್ಮ ಸಂಸ್ಥೆ ಆವರಣದಲ್ಲಿ ಅಕ್ಷರ ದಾಸೋಹಕ್ಕೆ ಸಂಸ್ಥೆಯ ವ್ಯವಸ್ಥಾಪಕ ಲಕ್ಷ್ಮಣೇಗೌಡ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ನಮ್ಮ ಸಂಸ್ಥೆಯಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳೆ ಹೆಚ್ಚಾಗಿದ್ದಾರೆ. ಹಳ್ಳಿಗಾಡಿನ ಬಡ ಕುಟುಂಬದ ಮಕ್ಕಳಿಗೆ ತುಂಬಾ ಅನುಕೂಲವಾಗಿದ್ದು, ಬಿಸಿ ಊಟದ ಜತೆಗೆ ಶಿಕ್ಷಣ ಕೂಡ ನೀಡುತ್ತೇವೆ ಎಂದು ತಿಳಿಸಿದರು. ಎಸ್ಡಿಎಂಸಿ ಅಧ್ಯಕ್ಷ ಜಗದೀಶ್, ಉಪಾಧ್ಯಕ್ಷೆ ಮೀನಾಕ್ಷಿ ಇದ್ದರು.