ಮೈಸೂರು: ಮೈಸೂರು- ಬೆಂಗಳೂರು ರೈಲ್ವೆ ಮಾರ್ಗದ ಮಂಡ್ಯ ನಿಲ್ದಾಣ ಬಳಿ ಕಾಮಗಾರಿ ಹಮ್ಮಿಕೊಳ್ಳುವುದರಿಂದ ಆ.8, 11 ಮತ್ತು 12 ರಂದು ಪ್ಯಾಸೆಂಜರ್ ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ ಎಂದು ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಅನಿಲ್ಕುಮಾರ್ ತಿಳಿಸಿದ್ದಾರೆ.
ಹಣ್ಣು ವಿತರಿಸುವ ಮೂಲಕ ಹುಟ್ಟುಹಬ್ಬ ಆಚರಣೆ
ಮೈಸೂರು: ನಗರ ಕಾಂಗ್ರೆಸ್ ಸಮಿತಿಯಿಂದ ರಾಮಕೃಷ್ಣನಗರದಲ್ಲಿರುವ ನಿರೀಕ್ಷೆ ಬುದ್ಧಿಮಾಂದ್ಯ ಮಕ್ಕಳ ಶಾಲೆಯಲ್ಲಿ ಹಣ್ಣು ಹಂಪಲು ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ. ದೀಪಕ್ ಮಾತನಾಡಿದರು. ಮಾಜಿ ಸಂಸದ ಎ. ಸಿದ್ದರಾಜು, ವಸ್ತುಪ್ರದರ್ಶನ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆರ್. ಮೂರ್ತಿ, ಕಾಂಗ್ರೆಸ್ ಮುಖಂಡರಾದ ಎನ್. ಭಾಸ್ಕರ್, ಹಿರಿಯ ವಕೀಲ ಅರವಿಂದ್, ಶ್ರೀನಿವಾಸಕುಮಾರ್, ಎಲ್. ಭಾಸ್ಕರ್, ಡಿಸಿಸಿ ಸದಸ್ಯರಾದ ಅಶೋಕ್ ಕುಮಾರ್, ಮಹಿಳಾ ಕಾಂಗ್ರೆಸ್ ಘಟಕದ ಕಾರ್ಯದರ್ಶಿ ಡಾ. ಸುಜಾತ ರಾವ್, ಚಂದ್ರಮೋಹನ್ ಇತರರು ಇದ್ದರು.