ಚಾಮರಾಜನಗರ

ವಿದ್ಯಾರ್ಥಿಗಳಿಗೆ ಸಾಹಿತ್ಯ,ಸಂಸ್ಕೃತಿ ಅಭಿರುಚಿ ಮುಖ್ಯ

ಚಾಮರಾಜನಗರ: ವಿದ್ಯಾರ್ಥಿಗಳು ಎಲ್ಲ ಜಾತಿ, ಧರ್ಮಗಳ ಸಂಕೋಲೆಯಿಂದ ಹೊರಬಂದು ಸಾಹಿತ್ಯ, ಸಂಸ್ಕೃತಿ ಚಿಂತಕರಾಗಬೇಕು ಎಂದು ಮಲೆಯೂರು ಗುರುಸ್ವಾಮಿ ಹೇಳಿದರು.ತಾಲೂಕಿನ ಅರಕಲವಾಡಿ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಂಡಿದ್ದ ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಮಿತಿ ದತ್ತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಸಾಪ ಜಿಲ್ಲಾಧ್ಯಕ್ಷ ಸೋಮಶೇಖರ ಬಿಸಲವಾಡಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಎ.ಎಂ ನಾಗಮಲ್ಲಪ್ಪ, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಸಿದ್ಧಮಲ್ಲಪ್ಪ ಮಾತನಾಡಿದರು. ಪ್ರಾಂಶುಪಾಲ ಮಹದೇವಯ್ಯ ಅಧ್ಯಕ್ಷತೆ ವಹಿಸಿದ್ದರು. ಹರದನಹಳ್ಳಿ ಹೋಬಳಿ ಘಟಕದ ಅಧ್ಯಕ್ಷ ನಟರಾಜು ಪ್ರಾಸ್ತವಿಕ ನುಡಿಗಳನ್ನಾಡಿದರು. ಕಲಾವಿದ ಬಿ.ಬಸವರಾಜು ಗೀತೆಗಳನ್ನು ಹಾಡಿ ವಿದ್ಯಾರ್ಥಿಗಳನ್ನು ರಂಜಿಸಿದರು. ಗ್ರಾಪಂ ಅಧ್ಯಕ್ಷೆ ಮಂಜುಳ, ಉಪನ್ಯಾಸಕ ಸದಾನಂದ ಹಾಗೂ ಕಾಲೇಜು ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು.
ಅಕ್ರಮ ಮರಳು: ಟ್ರ್ಯಾಕ್ಟರ್ ವಶ
ಯಳಂದೂರು: ಸುವರ್ಣಾವತಿ ನದಿಯಲ್ಲಿ ಅಕ್ರಮವಾಗಿ ಮರಳು ತುಂಬಿ ಕಳ್ಳ ಸಾಗಣೆ ಮಾಡುತ್ತಿದ್ದ ಟ್ರ್ಯಾಕ್ಟರ್ನ್ನು ಉಪ ವಿಭಾಗಾಧಿಕಾರಿ ಸತೀಶ್ಬಾಬು ಯರಿಯೂರು ಗ್ರಾಮದ ಬಳಿ ಹಿಡಿದು, ಅಕ್ರಮ ಮರಳು ಸಾಗಣೆ ಮಾಡುತ್ತಿರುವ ಪ್ರಕರಣ ದಾಖಲಿಸುವಂತೆ ಸೂಚಿಸಿದರು. ಮರಳು ತುಂಬಿರುವ ಟ್ರಾಕ್ಟರ್ನ್ನು ಚಾಲಕ ಬಿಟ್ಟು ಓಡಿ ಹೋಗಿದ್ದರಿಂದ, ಬೇರೊಬ್ಬನ ಚಾಲಕನ ಸಹಾಯದಿಂದ ಪೊಲೀಸ್ ಠಾಣೆಗೆ  ತಂದು ನಿಲ್ಲಿಸಿ ಪ್ರಕರಣ ದಾಖಲಿಸಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮದ್ದೂರಿನಲ್ಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲಾಠಿಚಾರ್ಜ್; 21 ಮಂದಿ ಬಂಧನ; ಪೊಲೀಸರಿಗೆ ಸಿಎಂ ಖಡಕ್ ಸೂಚನೆ

Mehul Choksi ಹಸ್ತಾಂತರಿಸಿದರೆ, ಮುಂಬೈ ಜೈಲಿನಲ್ಲಿ ವೈದ್ಯಕೀಯ ಆರೈಕೆ, ಹಾಸಿಗೆ, ವೈಯಕ್ತಿಕ ಸ್ಥಳಾವಕಾಶ ವ್ಯವಸ್ಥೆ: ಬೆಲ್ಜಿಯಂಗೆ ಭಾರತ ಭರವಸೆ!

Ramayana: ಸೀತಾ ಪಾತ್ರಕ್ಕೆ Miss Universe India 2025 'ಮಣಿಕಾ' ಆಯ್ಕೆ!

ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ, ನಾಲ್ವರು ಹೋಂಗಾರ್ಡ್​ ಸೇರಿ 8 ಮಂದಿ ಗಾಯ,ಸೆಕ್ಷನ್ 144 ಜಾರಿ

ಜಿಎಸ್‌ಟಿ ಕಡಿತ: ಕಾರು ಪ್ರಿಯರಿಗೆ ಬಂಪರ್, Hyundai India ಬೆಲೆಯಲ್ಲಿ ಭಾರಿ ಇಳಿಕೆ! ಎಷ್ಟು ಅಗ್ಗ ಗೊತ್ತಾ?

SCROLL FOR NEXT