ಸಿ.ಟಿ. ರವಿಗೆ ಹೈ ನೋಟಿಸ್
ಬೆಂಗಳೂರು: ಪ್ರತಿಷ್ಠಿತ ವ್ಯಕ್ತಿಗಳ ವಿರುದ್ಧದ ಖಾಸಗಿ ದೂರುಗಳ ವಿಚಾರಣೆಯನ್ನು ವಿಶೇಷ ತನಿಖಾ ತಂಡಕ್ಕೆ ವರ್ಗಾಯಿಸಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಸಚಿವ ಸಿ.ಟಿ.ರವಿ ವಿರುದ್ಧ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಈ ಹಿಂದೆಯೇ ಮೂರು ಬಾರಿ ನೋಟಿಸ್ ಜಾರಿಯಾಗಿದ್ದರೂ, ಪ್ರತಿಕ್ರಿಯೆ ನೀಡದ ಹಿನ್ನೆಲೆಯಲ್ಲಿ ಮುಖ್ಯ ನ್ಯಾ. ಡಿ.ಎಚ್.ವಘೇಲ ಹಾಗೂ ನ್ಯಾ.ಬಿ.ವಿ.ನಾಗರತ್ನ ಅವರಿದ್ದ ವಿಭಾಗೀಯ ಪೀಠ ಪ್ರತ್ಯೇಕ ನೋಟಿಸ್ ಜಾರಿ ಮಾಡಿದೆ.
ಖಾಸಗಿ ದೂರುಗಳನ್ನು ಲೋಕಾಯುಕ್ತ ಇಲ್ಲವೇ ಇತರ ನ್ಯಾಯಾಲಯಗಳು ವಿಚಾರಣೆ ನಡೆಸುವುದರಿಂದ ಇತರ ಪ್ರಕರಣಗಳ ವಿಚಾರಣೆಗೆ ತೊಂದರೆಯಾಗುತ್ತಿದೆ.
ಅಲ್ಲದೆ, ಈ ಪ್ರಕರಣಗಳ ತನಿಖೆಯಲ್ಲಿ ರಾಜಕಾರಣಿಗಳು ಇಲ್ಲವೇ ಪ್ರಭಾವಿ ವ್ಯಕ್ತಿಗಳು ಹಸ್ತಾಂತರ ಮಾಡುವ ಸಾಧ್ಯತೆಗಳಿವೆ. ಆದ್ದರಿಂದ ಪ್ರಕರಣವನ್ನು ವಿಶೇಷ ತನಿಖಾ ದಳಕ್ಕೆ ವರ್ಗಾಯಿಸಬೇಕು ಎಂದು ಅರ್ಜಿದಾರರು ಕೋರಿದ್ದರು.
ಈ ಸಂಬಂಧ ಖಾಸಗಿ ದೂರು ದಾಖಲಾಗಿರುವ ಎಲ್ಲಾ ಪ್ರತಿಷ್ಠಿತ ವ್ಯಕ್ತಿಗಳಿಗೆ ನೋಟಿಸ್ ಜಾರಿ ಮಾಡಲಾಗಿತ್ತು. ಆದರೆ, ಸಿ.ಟಿ.ರವಿ ಅವರು ನೋಟಿಸ್ಗೆ ಉತ್ತರ ನೀಡಿರಲಿಲ್ಲ.