ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಅನುದಾನ ಹಂಚಿಕೆ ಕುರಿತ ಶ್ವೇತಪತ್ರ ಹೊರಡಿಸಿ

Lingaraj Badiger
Updated On : 5 Apr 2013, 10:51 am

ಕಪ್ರ ವಾರ್ತೆ, ಚಿಕ್ಕಮಗಳೂರು, ಏ.4
ವಿಧಾನಪರಿಷತ್ ಸದಸ್ಯೆ ಗಾಯಿತ್ರಿ ಶಾಂತೇಗೌಡ ತಮ್ಮ ಅನುದಾನ ಹಂಚಿಕೆ ಕುರಿತ ಶ್ವೇತಪತ್ರವನ್ನು ಹೊರಡಿಸಬೇಕು ಎಂದು ಕೆಜೆಪಿ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಎಚ್.ಎಚ್. ದೇವರಾಜ್ ಆಗ್ರಹಿಸಿದ್ದಾರೆ.
 ಗಾಯಿತ್ರಿ ಶಾಂತೇಗೌಡ ಅವರು ಈ ಕೆಲಸ ಮಾಡದೆ ಹೋದರೆ ಕಾಂಗ್ರೆಸ್ ಪಕ್ಷ ಈ ಕೆಲಸ ಮಾಡಬೇಕು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
 ವಿಧಾನಪರಿಷತ್ ಸದಸ್ಯರು ತಮ್ಮ ಅನುದಾನವನ್ನು ಸಾರ್ವಜನಿಕರ ಕೆಲಸಕ್ಕೆ ಬಳಕೆ ಮಾಡಿಲ್ಲ ಎಂದು ಆರೋಪಿಸಿದರು.
 ಜಿಲ್ಲೆಯ ಐದು ಕ್ಷೇತ್ರಗಳ ಪೈಕಿ ತರೀಕೆರೆ ಹಾಗೂ ಕಡೂರು ಕ್ಷೇತ್ರಗಳಿಗೆ ಕೆಜೆಪಿ ಅಭ್ಯರ್ಥಿ ಹೆಸರು ಪ್ರಕಟಿಸಲಾಗಿದೆ. ಇನ್ನುಳಿದ ಮೂರು ಕ್ಷೇತ್ರಗಳಿಗೆ ಶೀಘ್ರದಲ್ಲೇ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೆಸರು ಪ್ರಕಟಿಸಲಿದ್ದಾರೆ ಎಂದರು.
ನೀತಿ ಸಂಹಿತೆ ಉಲ್ಲಂಘನೆ: ಚುನಾವಣೆಯಲ್ಲಿ ಹಣ, ಹೆಂಡ ಹಂಚುವುದಿಲ್ಲ ಎಂದು ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್‌ನವರು ಸಿರಿಗೆರೆ ಶ್ರೀಗಳ ಬಳಿ ಪ್ರಮಾಣ ಮಾಡಿದ್ದಾರೆ. ಬಿಜೆಪಿ ಪ್ರಮಾಣ ಮಾಡಿದರೂ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ.  ಆಡಳಿತ ಯಂತ್ರ ಮಂತ್ರಿಗಳು ಹಾಗೂ ಶಾಸಕರು ಹೇಳಿದಂತೆ ಕೇಳುತ್ತಿದೆ ಎಂದು ಆರೋಪಿಸಿದರು.
ಸಚಿವ ಸಿ.ಟಿ. ರವಿ ಹೊಂದಿರುವ ಆಸ್ತಿಯ ಬಗ್ಗೆ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. ಅವರು ಕ್ಷೇತ್ರದ ಅಭಿವೃದ್ಧಿಗೆ # 800 ಕೋಟಿ ತಂದಿದ್ದೇನೆ ಎಂದು ಹೇಳುತ್ತಿದ್ದಾರೆ. ಸುಮಾರು # 600 ಕೋಟಿ ಸ್ವಹಿತಾಶಕ್ತಿಗೆ ಬಳಕೆಯಾಗಿದೆ. ಅವರು ಪ್ರಮಾಣ ಮಾಡುವ, ಮತ ಕೇಳುವ ನೈತಿಕತೆ ಕಳೆದುಕೊಂಡಿದ್ದಾರೆ ಎಂದು ಹೇಳಿದ  ದೇವರಾಜಾ, ಸಿರಿಗೆರೆ ಶ್ರೀಗಳು ಪ್ರಮಾಣ ಮಾಡಿದವರು ಯೋಗ್ಯರೋ ಎಂಬುದನ್ನು ಸರ್ವೇ ಮಾಡಿಸಬೇಕು ಎಂದರು.
ಕೆಜೆಪಿ ಸಭೆ: ಶುಕ್ರವಾರ ಬೆಳಿಗ್ಗೆ 10.30ಕ್ಕೆ ನಗರದ ಅರಳಗುಪ್ಪೆ ಚಂದ್ರೇಗೌಡ ಕಲ್ಯಾಣ ಮಂಟಪದಲ್ಲಿ ಕೆಜೆಪಿ  ಕಾರ್ಯಕರ್ತರ ಸಭೆ ನಡೆಯಲಿದೆ.
ಸಭೆಯಲ್ಲಿ ಕೆಜೆಪಿ ಪ್ರಚಾರ ಸಮಿತಿ ಅಧ್ಯಕ್ಷ ಧನಂಜಯಕುಮಾರ್, ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಮಂಜುಳಮ್ಮ, ಪ್ರಧಾನ ಕಾರ್ಯದರ್ಶಿ ಭಾರತಿ ಶೆಟ್ಟಿ, ರೈತ ಘಟಕದ ಪ್ರಧಾನ ಕಾರ್ಯದರ್ಶಿ ವಿಜಯ್  ವಿಕ್ರಮ್ ಹಾಗೂ ವಿಜಯೇಂದ್ರ ಪಾಲ್ಗೊಳ್ಳಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲೋಕೇಶ್, ನಗರ ಘಟಕ ಅಧ್ಯಕ್ಷ ಜಿ. ರವಿಕುಮಾರ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement