ಇಂದಿನಿಂದ ಬೇಸಿಗೆ ಶಿಬಿರ
ಚಿಕ್ಕಮಗಳೂರು: ಮಾಧ್ಯಮ ಸಂಸ್ಕೃತಿ ಪ್ರತಿಷ್ಠಾನದ ಆಶ್ರಯದಲ್ಲಿ ಏ.5ರಿಂದ 14ರ ವರೆಗೆ ಮಕ್ಕಳ ಬೇಸಿಗೆ ಶಿಬಿರವನ್ನು ನಗರದ ಆಜಾದ್ ಪಾರ್ಕ್ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯ ಆವರಣದಲ್ಲಿ ಆಯೋಜಿಸಲಾಗಿದೆ.
6 ರಿಂದ 8ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶಿಬಿರಕ್ಕೆ ಉಚಿತ ಪ್ರವೇಶ ಕಲ್ಪಿಸಲಾಗಿದೆ. ಯೋಗ, ಆಟಗಳು, ಪ್ರಾರ್ಥನೆ, ರಾಷ್ಟ್ರೀಯತೆ, ಭಾವೈಕ್ಯತೆ, ನೈತಿಕಶಿಕ್ಷಣ ಕುರಿತಂತೆ ಮಾಹಿತಿ ನೀಡಲಾಗುವುದು.
ಏ.5ರ ಬೆಳಗ್ಗೆ 10 ಗಂಟೆಗೆ ಶಿಬಿರ ಉದ್ಘಾಟನೆಗೊಳ್ಳಲಿದೆ. ಪ್ರತಿನಿತ್ಯ ಬೆಳಿಗ್ಗೆ 7 ರಿಂದ 11ರ ವರೆಗೆ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಪ್ರಭುಲಿಂಗಶಾಸ್ತ್ರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಹಿಂದುಳಿದ ಪ್ರದೇಶದ ಮಕ್ಕಳಿಗೆ ಪ್ರಥಮ ಆದ್ಯತೆ. ಒಟ್ಟು 50 ಮಕ್ಕಳಿಗೆ ಪ್ರವೇಶಾವಕಾಶ ಕಲ್ಪಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಭಾವಚಿತ್ರದೊಂದಿಗೆ ಸ್ವ-ವಿವರಗಳನ್ನೊಳಗೊಂಡ ಅರ್ಜಿಯನ್ನು ಶಾಲಾ ಮುಖ್ಯ ಶಿಕ್ಷಕ ಎಸ್.ಈ. ಲೋಕೇಶ್ವರಾಚಾರ್ ಅವರಿಗೆ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗೆ ದೂ- 234433 ಅಥವಾ 94489 97563 ಸಂಪರ್ಕಿಸಬಹುದು.