ಪಕ್ಷ ವರೋಧಿ ಚಟುವಟಿಕೆಗೆ ಕ್ಯಾಮೆರಾ ಕಣ್ಗಾವಲು
ಮೂಡಿಗೆರೆ: ವಿಧಾನ ಸಭಾ ಚುನಾವಣೆ ಸಮೀಪಿಸುತ್ತಿದ್ದು, ಪಕ್ಷದ ಕೆಲವರು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದು, ಅಂತಹವರ ವಿರುದ್ಧ ಕ್ರಮ ಜರುಗಿಸಲು ಕ್ಯಾಮರ ಕಣ್ಗಾವಲನ್ನು ಹಾಕಲಾಗಿದೆ ಎಂದು ಕೆಪಿಸಿಸಿ ಕಾರ್ಯದರ್ಶಿ ಜಿ.ಎಚ್. ಹಾಲಪ್ಪಗೌಡ ತಿಳಿಸಿದ್ದಾರೆ.
ಪತ್ರಿಕೆಯೊಂದಿಗೆ ಮಾತನಾಡಿ, ಈ ಬಾರಿ ಚುನಾವಣೆಯಲ್ಲಿ ಜಿಲ್ಲೆಯ 5 ತಾಲೂಕುಗಳಲ್ಲಿ ಕಾಂಗ್ರೆಸ್ ಸೂಕ್ತ ಅಭ್ಯರ್ಥಿಗಳ ಆಯ್ಕೆ ನಡೆಸುತ್ತಿದೆ. ಆದರೆ ಕೆಲವು ಕಾರ್ಯಕರ್ತರು ಬಿ.ಫಾರಂನ್ನು ತಮಗೆ ಬೇಕಾದವರಿಗೆ ನೀಡುವಂತೆ ಒತ್ತಾಸುವುದರ ಮೂಲಕ ಪಕ್ಷದ ಸಂಘಟನೆ ಒಡೆಯಲು ಸಂಚು ರೂಪಿಸುತ್ತಿರುವುದು ತಮ್ಮ ಗಮನಕ್ಕೆ ಬಂದಿದ್ದು ಇಂತಹವರ ಮೇಲೆ ನಿಗಾ ವಹಿಸಲು ವಿಡೀಯೋ ಕ್ಯಾಮರಗಳನ್ನು ಅಳವಡಿಸಲಾಗುತ್ತಿದೆ. ಚುನಾವಣೆ ಮುಗಿದ ನಂತರ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿರುವವರ ವಿಡೀಯೋ ಚಿತ್ರಿಕರಣವನ್ನು ಕೆಪಿಸಿಸಿ ಹಾಗೂ ಎಐಸಿಸಿಗೆ ಕಳುಹಿಸಿ ಅಂತಹವರ ಮೇಲೆ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಜಿಲ್ಲೆಯ 5 ತಾಲೂಕುಗಳಲ್ಲಿ ಯಾವುದೇ ಅಭ್ಯರ್ಥಿಗಳಿಗೆ ಬಿ.ಫಾರಂ ನೀಡಿದಲ್ಲಿ ಅವರ ಗೆಲುವಿಗೆ ಪಕ್ಷದ ಕಾರ್ಯಕರ್ತರು ಶ್ರಮಿಸುವಂತೆ ಮನವಿ ಮಾಡಿದರು.