ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಮತದಾನ ಪ್ರತಿಯೊಬ್ಬರ ಹಕ್ಕು

Lingaraj Badiger
Updated On : 5 Apr 2013, 10:50 am

ಶೃಂಗೇರಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರೂ ಮತ ಚಲಾಯಿಸುವುದರ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕು. ಮತದಾನ ಸಂವಿಧಾನ ಬದ್ಧ ಸಾಮಾಜಿಕ ಕರ್ತವ್ಯವಾಗಿದೆ ಎಂದು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಸಿಂಗಾರಿಗೌಡ ಹೇಳಿದರು.
ಪಟ್ಟಣದ ಗೌರೀಶಂಕರ ಸಭಾಂಗಣದಲ್ಲಿ ಚುನಾವಣಾ ಆಯೋಗ, ಅಂಗನವಾಡಿ ಕಾರ್ಯಕರ್ತೆಯರ ಒಕ್ಕೂಟ, ಆಶಾ ಕಾರ್ಯಕರ್ತೆಯರ ಒಕ್ಕೂಟದ ಆಶ್ರಯದಲ್ಲಿ ನಡೆದ ಮತದಾನ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪ್ರತಿಯೊಬ್ಬರ ಹಕ್ಕು: ಮತದಾನ ನಾಗರಿಕ ಹಕ್ಕುಗಳಲ್ಲೊಂದು. ಪ್ರತಿಯೊಬ್ಬರು ನಿರ್ಭೀತಿಯಿಂದ ಮತಗಟ್ಟೆಗೆ ಬಂದು ಮತಚಲಾಯಿಸುವುದರ ಜೊತೆಗೆ ಪ್ರಜಾಪ್ರಭುತ್ಲ, ಸಂವಿಧಾನದ ಉದ್ದೇಶ ಈಡೇರಿಸಬೇಕು. ಪ್ರತಿಯೊಬ್ಬರೂ ಮತದಾನದ ಬಗ್ಗೆ ಅರಿವು ಹೊಂದಿರಬೇಕು. ಇದು ಕೇವಲ ಇಲಾಖೆಗಳ ಕರ್ತವ್ಯವಲ್ಲ. ದೇಶದ ಪ್ರತಿಯೊಬ್ಬ ಪ್ರಜ್ಞಾವಂತ ನಾಗರಿಕನ ಸಾಮಾಜಿಕ ಜವಾಬ್ದಾರಿ ಹಾಗೂ ಕರ್ತವ್ಯವಾಗಿದೆ ಎಂದರು.
ತಹಸೀಲ್ದಾರ್ ಶ್ರೀನಿವಾಸ್ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ತಾಲೂಕು ಕಾರ್ಯನಿರ್ವಾಹಣಾಧಿಕಾರಿ ಶರಶ್ಚಂದ್ರ, ತಾಲೂಕು ಆರೋಗ್ಯಧಿಕಾರಿ ಡಾ. ವೆಂಕಟೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಸನ್ನಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಜಿಲ್ಲಾ ನಿರ್ದೆಶಕ ಹೆಚ್.ಜಿ.ನರಸಿಂಹನಾಯಕ್, ಲಲಿತಾ ಬಾಯಿ ಮತ್ತಿತರರು ಉಪಸ್ಥಿತರಿದ್ದರು. ಟಿ.ಎಲ್. ಉಮೇಶ್ ಕಾರ್ಯಕ್ರಮ ಸ್ವಾಗತಿಸಿದರು. ಶಿವಕುಮಾರ್ ನಿರೂಪಿಸಿದರು. ಮತದಾನದ ಮಹತ್ವ ಕುರಿತ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಪಟ್ಟಣದ ಪುರದ್ವಾರದಿಂದ ಮತದಾನ ಜಾಗೃತಿ ಅಭಿಯಾನ ಜಾಥಾ ಹೊರಟು ಪಟ್ಟಣದ ಪ್ರಮುಖ ಬೀದಿಯಲ್ಲಿ ಸಾಗಿ ಪಟ್ಟಣ ಪಂಚಾಯಿತಿ ಮುಂಭಾಗದಲ್ಲಿ ಸಮಾವೇಶಗೊಂಡಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement