ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಅಕ್ರಮ ಮದ್ಯ ವಶ

Lingaraj Badiger
Updated On : 8 Apr 2013, 11:35 am

ಚಿಕ್ಕಮಗಳೂರು: ಮನೆಯೊಂದರಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಸುಮಾರು 10 ಲಕ್ಷ ಮೌಲ್ಯದ ಮದ್ಯವನ್ನು ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಶನಿವಾರ ರಾತ್ರಿ ವಶಪಡಿಸಿಕೊಂಡಿದ್ದಾರೆ. ವಿವಿಧ ಕಂಪನಿಯ 450 ಬಾಕ್ಸ್ ಮದ್ಯ, ಸ್ಥಳದಲ್ಲಿಯೇ ಇದ್ದ ವಾಹನ ಸೇರಿ ಮೂವರನ್ನು ಬಂಧಿಸಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಗ್ರಾಮದ ಕೃಷ್ಣಪ್ಪ ಎಂಬುವವರ ಮನೆಯಲ್ಲಿ ಅಕ್ರಮವಾಗಿ ಮದ್ಯ ದಾಸ್ತಾನು ಮಾಡಿರುವ ಬಗ್ಗೆ ಸಿಕ್ಕ ಖಚಿತ ಮಾಹಿತಿಯ ಮೇರೆಗೆ ಜಿಲ್ಲಾ ರಕ್ಷಣಾಧಿಕಾರಿ ಎನ್. ಶಶಿಕುಮಾರ್ ಅವರ ಮಾರ್ಗದರ್ಶನದಲ್ಲಿ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್‌ಸ್ಪೆಕ್ಟರ್ ಮಧು ಹಾಗೂ ಸಿಬ್ಬಂದಿ ದಾಳಿ ನಡೆಸಿ ಮದ್ಯವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಮೋಹನ್, ಚಂದ್ರಶೇಖರ್ ಹಾಗೂ ಪ್ರಸನ್ನ ಎಂಬುವವರನ್ನು ಬಂಧಿಸಲಾಗಿದ್ದು, ನೀತಿ ಸಂಹಿತೆ ಅಧಿಕಾರಿ ಬಸವರಾಜ್ ನೀಡಿರುವ ದೂರಿನನ್ವಯ ಪ್ರಕರಣ ದಾಖಲು ಮಾಡಲಾಗಿದೆ.

ಅಲೆಗೆ ಸಿಲುಕಿ ವಿದ್ಯಾರ್ಥಿ ಸಾವು
ಕ.ಪ್ರ.ವಾರ್ತೆ, ಕಡೂರು, ಏ.7: ಕಡೂರು ಪಟ್ಟಣದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರ ಪುತ್ರ ಮಂಗಳೂರು ಸಮೀಪದ ಪಣಂಬೂರು ಬೀಚಿನಲ್ಲಿ ಈಜಲು ತೆರಳಿ ಅಲೆಯ ಸೆಳೆತದಿಂದ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.            
  ಆಕಾಶ್ ಮೃತ ವಿದ್ಯಾರ್ಥಿ. ಕಡೂರು ಪಟ್ಟಣದ ಹಳೇಪೇಟೆಯ ಸ.ಪ್ರಾ. ಶಾಲೆಯ ಮುಖ್ಯ ಶಿಕ್ಷಕ ರಮೇಶನಾಯ್ಕ ಎಂಬುವವರ ಪುತ್ರನಾಗಿರುವ ಆಕಾಶ್, ಬಾಳೆಹೊನ್ನೂರಿನ ನವೋದಯ ಶಾಲೆಯಲ್ಲಿ ಪಿಯುಸಿ ಪರೀಕ್ಷೆ ಮುಗಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement