ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಬಸ್ ನಿಲ್ದಾಣದಲ್ಲಿ ನೀರಿಗೆ ಪರದಾಟ

Lingaraj Badiger
Updated On : 8 Apr 2013, 11:35 am

ಬೀರೂರು: ಇಲ್ಲಿನ ಖಾಸಗಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕುಡಿಯುವ ನೀರಿನ ಸೌಲಭ್ಯವಿಲ್ಲದೆ ತೀವ್ರ ತೊಂದರೆ ಅನುಭವಿಸುವಂತಾಗಿದೆ.
ಬೀರೂರು ರೈಲ್ವೆ ಜಂಕ್ಷನ್ ಹೊಂದಿರುವುದರಿಂದ ಗ್ರಾಮೀಣ ಭಾಗಗಳಿಂದ ನಿತ್ಯವೂ ಸಹಸ್ರಾರು ಪ್ರಯಾಣಿಕರು ಬಂದು ಹೋಗುತ್ತಾರೆ. ಆದರೆ ಈ ಭಾಗದ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿಲ್ಲದೆ ಪರದಾಡುವಂತಾಗಿದೆ. ಶಾಲಾ ಮಕ್ಕಳು, ವೃದ್ಧರು, ಮಹಿಳೆಯರು ಸೇರಿದಂತೆ ಪ್ರಯಾಣಿಕರು ನೀರಿಗಾಗಿ ಹಾಹಾಕಾರ ಪಡುತ್ತಿದ್ದಾರೆ.
ಹೋಟೆಲ್, ಕ್ಯಾಂಟೀನ್‌ಗಳಲ್ಲಿ ತಿಂಡಿ ತಿನಿಸು ಕೊಂಡರೆ ಮಾತ್ರ ನೀರು ನೀಡುತ್ತಾರೆ. ಬಿಸಿಲಿನ ತಾಪದಿಂದಾಗಿ ತತ್ತರಿಸಿ ಹೋಗಿದ್ದಾರೆ. ಪುರಸಭೆ ತಕ್ಷಣ ಇತ್ತ ಕಡೆ ಗಮನ ಹರಿಸಿ ಕಿರು ನೀರು ಸರಬರಾಜು ಘಟಕ ಅಳವಡಿಸಿ ನೀರು ಪೂರೈಕೆಗೆ ವ್ಯವಸ್ಥೆ ಮಾಡಿದಲ್ಲಿ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಟ್ಟಂತಾಗುತ್ತದೆ ಎಂಬುದು ಜನರ ಅಭಿಪ್ರಾಯವಾಗಿದೆ.
ಆದರೆ ಪಟ್ಟಣದಲ್ಲಿ ಸಾಕಷ್ಟು ಪ್ರತಿಷ್ಠಿತ ಸಂಘ ಸಂಸ್ಥೆಗಳಿದ್ದರೂ ಬಾಯಾರಿ ಬಂದ ಪ್ರಯಾಣಿಕರಿಗೆ ಕನಿಷ್ಠ ಕುಡಿಯುವ ನೀರಿನ ಸೌಕರ್ಯ ಕಲ್ಪಿಸದಿರುವುದು ವಿಷಾದದ ಸಂಗತಿ ಎನ್ನುತ್ತಾರೆ ಪಟ್ಟಣದ ನಾಗರಿಕರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement