ಇಂದು ವಿವಿಧೆಡೆ ವಿದ್ಯುತ್ ವ್ಯತ್ಯಯ (ಸುದ್ದಿ ಸಂಕ್ಷೇಪ)
ಚಿಕ್ಕಮಗಳೂರು: ನಗರದ ರತ್ನಗಿರಿ ರಸ್ತೆಯ ಅಗಲೀಕರಣ ಕಾಮಗಾರಿ ನಡೆಯುತ್ತಿರುವುದರಿಂದ ಮಾರ್ಕೇಟ್ ರಸ್ತೆಯ ಫೀಡರ್ ಮಾರ್ಗದ ವಾಹಕದ ಬದಲಾವಣೆ ಕಾರ್ಯ ಕೈಗೆತ್ತಿಕೊಳ್ಳಲಾಗುತ್ತಿದೆ.
ಅದುದರಿಂದ ಏ. 10 ಮತ್ತು 12 ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಆರ್.ಜಿ. ರಸ್ತೆ, ವಿಜಯಪುರ, ತಿಲಕ್ ಪಾರ್ಕ್, ಬಸವರಾಜ ಲೇಔಟ್, ಮಲ್ಲಂದೂರು ರಸ್ತೆ, ದುಬೈನಗರ, ಮೊಹಲ್ಲಾ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
17ರಂದು ಕಿಗ್ಗಾ ಮಹಾರಥೋತ್ಸವ
ಶೃಂಗೇರಿ: ತಾಲೂಕಿನ ಮರ್ಕಲ್ ಪಂಚಾಯಿತಿ ಕಿಗ್ಗಾ ಶ್ರೀ ಋಷ್ಯ ಶೃಂಗೇಶ್ವರ ಸ್ವಾಮಿ ಮಹಾರಥೋತ್ಸವ ಏ.17ರಂದು ನಡೆಯಲಿದೆ. ರಥೋತ್ಸವ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಒಂಬತ್ತು ದಿನಗಳ ಕಾಲ ಜಾತ್ರಾ ಮಹೋತ್ಸವ ನಡೆಯಲಿದೆ.