ತರಬೇತಿ ಶಿಬಿರ
ಚಿಕ್ಕಮಗಳೂರು: ಭಾರತೀಯ ಕ್ರೀಡಾ ಪ್ರಾಧಿಕಾರದ ವತಿಯಿಂದ ಆರು ವಾರಗಳ ತರಬೇತಿ ಶಿಬಿರವು ಮೇ 17 ರಿಂದ ಜೂನ್ 26 ರವರೆಗೆ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿಯು ಪಟಿಯಾಲ, ಕೊಲ್ಕತ್ತ, ಗಾಂಧಿನಗರ, ಗುಂಟೂರು, ಧಾರವಾಡ, ಮಣಿಪಾಲ್, ಔರಂಗಬಾದ್, ತಿರುವನಂತಪುರ ಮತ್ತು ಇಂಫಾಲ್‌ನಲ್ಲಿ ಪುರುಷ ಮತ್ತು ಮಹಿಳೆಯರಿಗಾಗಿ ಏರ್ಪಡಿಸಲಾಗಿದೆ. ತರಬೇತಿಯಲ್ಲಿ ಭಾಗವಹಿಸುವ ಆಸಕ್ತ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕ ಕಚೇರಿ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ಚಿಕ್ಕಮಗಳೂರು (ದೂರವಾಣಿ ಸಂಖ್ಯೆ 08262- 220324) ಇವರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಅರ್ಜಿ ಆಹ್ವಾನ
ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಅಧೀನ ಕಚೇರಿಗಳಲ್ಲಿ ಕಿರಿಯ ಹಿಂದಿ ಅನುವಾದಕ ಹಾಗೂ ಕೇಂದ್ರ ಹಿಂದಿ ತರಬೇತಿ ಸಂಸ್ಥೆಯಲ್ಲಿ ಹಿಂದಿ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಗೆ ಜೂನ್ 2ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 19 ಕೊನೆಯ ದಿನ. ಪ್ರಸಾರ ಭಾರತಿಯಲ್ಲಿ ಪ್ರೋಗ್ರಾಂ ಎಕ್ಸಿಕ್ಯೂಟಿವ್ ಹಾಗೂ ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿಗೂ ಜೂನ್ 2 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್ 17 ಕೊನೆಯ ದಿನ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.