ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ನಾಳೆ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

Vishwanath S
Updated On : 14 Apr 2013, 1:11 am

ಕ.ಪ್ರ.ವಾರ್ತೆ, ಮೂಡಿಗೆರೆ, ಏ.13
ಮೂಡಿಗೆರೆ ಮೀಸಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಏ.15ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಪಿ. ಮನು ತಿಳಿಸಿದ್ದಾರೆ.
   ಅವರು ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಪಕ್ಷವು ತನ್ನದೆ ಆದ ಮತದಾರರ ಶಕ್ತಿ ಹೊಂದಿದೆ. ಪಕ್ಷದ ಬಲಿಷ್ಠ ಕಾರ್ಯಕರ್ತರ ಪಡೆಯು ಕ್ಷೇತ್ರ ವ್ಯಾಪ್ತಿಯಲ್ಲಿ ಅಭ್ಯರ್ಥಿಯ ಗೆಲುವಿಗೆ ಅವಿರತ ಶ್ರಮಪಡುತ್ತಿದ್ದಾರೆ.    
   ಕ್ಷೇತ್ರದ ಪ್ರತಿ ಬೂತ್ ಮಟ್ಟದಲ್ಲಿ ಪಕ್ಷವು ಸದೃಢವಾಗಿದೆ. ಹಳ್ಳಗಾಡಿನಲ್ಲಿ ಪಕ್ಷದ ಪರ ಉತ್ತಮ ವಾತಾವರಣವಿದೆ.
 ಆಡಳಿತಾರೂಢ ಹಗರಣಗಳು ಈ ಬಾರಿ ಆ ಪಕ್ಷದ ಅಭ್ಯರ್ಥಿಯ ಸೋಲಿಗೆ ಕಾರಣವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
  ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಮಾತನಾಡಿ, ಸಮುದ್ರದಷ್ಟು ವಿಶಾಲವಾದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗುವುದು ಒಂದು ಸಾಧನೆಯಾಗಿದೆ. ತಮ್ಮ ಪಕ್ಷವು ಎದುರಾಳಿ ಅಭ್ಯರ್ಥಿಗಳ ವಿರುದ್ಧ ಟೀಕಿಸುವುದಕ್ಕಿಂತ ಕಾಂಗ್ರೆಸ್ ಸಾಧನೆಯನ್ನು ಮುಂದಿಟ್ಟುಕೊಂಡು ಮತ ಯಾಚಿಸಲಿದ್ದೇವೆ ಎಂದರು.
   ಇಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಗೋಣಿಬೀಡು ಮತ್ತು ಅಂಬಳೆ ಹೋಬಳಿಗಳ ವಿವಿಧ ಹಳ್ಳಿಗಳಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದರು. ಸಂಜೆ ಚುನಾವಣಾ ಪ್ರಚಾರವನ್ನು ಮುಗಿಸಿದ ಬಳಿಕ ಬಿ.ಪಾರಂ ತರಲು ಬೆಂಗಳೂರಿಗೆ ಪ್ರಯಾಣಿಸಿದ್ದಾರೆ.
    ಅವರು ಏ.15ರಂದು ಸೋಮವಾರ 11 ಗಂಟೆಗೆ ಪಕ್ಷದ ಕಚೇರಿಯಿಂದ ಮೆರವಣಿಗೆಯಲ್ಲಿ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement