ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ನಾಳೆಯಿಂದ ತರಬೇತಿ ಶಿಬಿರ

Vishwanath S
Updated On : 14 Apr 2013, 1:10 am

ಚಿಕ್ಕಮಗಳೂರು: ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ವತಿಯಿಂದ ಗಿರಿಜನ ಉಪ ಯೋಜನೆಯಡಿಯಲ್ಲಿ ಪರಿಶಿಷ್ಟ ಪಂಗಡದ ಕ್ರೀಡಾಪಟುಗಳ ಅನ್ವೇಷಣೆ ಮತ್ತು ತರಬೇತಿ ಶಿಬಿರವನ್ನು ಏಪ್ರಿಲ್ 15 ರಿಂದ 24 ರವರೆಗೆ ಚಿಕ್ಕಮಗಳೂರು ತಾಲೂಕಿನ ಹಾಂದಿ, ಗುಲ್ ಪೇಟೆ, ಮಾಚಗೊಂಡನಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆಟದ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.ಆಸಕ್ತ ಕ್ರೀಡಾಪಟುಗಳು ತರಬೇತಿಗೆ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಇವರನ್ನು ಸಂಪರ್ಕಿಸಬಹುದು.

ಸೇನಾ ನೇಮಕಾತಿ ರ್ಯಾಲಿ ಮುಂದಕ್ಕೆ
ನಗರದ ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣದಲ್ಲಿ ಏಪ್ರಿಲ್ 16 ರಿಂದ 23ರವರೆಗೆ ಏರ್ಪಡಿಸಲಾಗಿದ್ದ ಸೇನಾ ನೇಮಕಾತಿ ರ್ಯಾಲಿಯು ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. 

ಅರ್ಜಿ ಆಹ್ವಾನ
ಸಾರ್ವಜನಿಕ ಶಿಕ್ಷಣ ಇಲಾಖೆಯು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ವೇತನ ಸಹಿತವಾಗಿ ಉನ್ನತ ವ್ಯಾಸಂಗಕ್ಕೆ ಅರ್ಜಿ ಆಹ್ವಾನಿಸಿದೆ. 5 ವರ್ಷಗಳ ಸೇವೆ ಪೂರೈಸಿದ ಶಿಕ್ಷಕರು ಬಿ.ಎ. (ಆಂಗ್ಲ) ಮತ್ತು ಬಿ.ಎಸ್ಸಿ. (ಪಿಸಿಎಂ ಮತ್ತು ಸಿಬಿಜಡ್) ಪದವಿ ವಿಷಯಗಳಲ್ಲಿ ವ್ಯಾಸಂಗ ಮಾಡಲು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ, ಚಿಕ್ಕಮಗಳೂರು ಇವರನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement