ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ವಿದ್ಯಾರ್ಥಿಗಳಿಗೆ ಬೇಸಿಗೆ ಶಿಬಿರಗಳು ಸಹಕಾರಿ

Vishwanath S
Updated On : 14 Apr 2013, 1:09 am

ಕ.ಪ್ರ ವಾರ್ತೆ, ಚಿಕ್ಕಮಗಳೂರು, ಏ.13
ವಿದ್ಯಾರ್ಥಿಗಳಿಗೆ ಪಠ್ಯಗಳ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬೇಸಿಗೆ ಶಿಬಿರಗಳು ಹೆಚ್ಚು ಉಪಯೋಗಕಾರಿಯಾಗುತ್ತವೆ ಎಂದು ಕಾಂಕ್‌ವುಡ್ ಮಾಲೀಕರಾದ ಐ.ವಿ. ರಂಜಿತ್ ಹೇಳಿದ್ದಾರೆ.
ನಗರದ ಹೊರವಲಯದಲ್ಲಿರುವ ಅಂಬರ್ ವ್ಯಾಲಿ ವಸತಿ ಶಾಲೆಯಲ್ಲಿ ಶುಕ್ರವಾರ ಆರಂಭಗೊಂಡ ಬೇಸಿಗೆ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಶಾಲೆಯಲ್ಲಿ ಅತ್ಯುತ್ತಮ ಪರಿಸರವಿದ್ದು, ಮಕ್ಕಳಿಗೆ ಪೂರಕ ವಾತಾವರಣ ಸೃಷ್ಟಿಸಿ ನುರಿತ ಶಿಕ್ಷಕರಿಂದ ಹಲವು ಸಾಂಸ್ಕೃತಿಕ ಚಟುವಟಿಕೆಗಳನ್ನು ತಿಳಿಸಿಕೊಡಲಾಗುವುದು ಎಂದರು.
ಪ್ರಾಂಶುಪಾಲರಾದ ರವಿಕುಮಾರ್ ಮಾತನಾಡಿ, 13 ದಿನಗಳ ಕಾಲ ನಡೆಯುವ ಈ ಬೇಸಿಗೆ ಶಿಬಿರದಲ್ಲಿ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಮಕ್ಕಳು ಆಗಮಿಸಿದ್ದಾರೆ. ಈ ಶಿಬಿರದಲ್ಲಿ ಸಂಗೀತ, ಕಲೆ, ನೃತ್ಯ, ಈಜು, ಯೋಗ, ಬಾಸ್ಕೆಟ್ ಬಾಲ್ ಜೊತೆಗೆ ಇಂಗ್ಲೀಷ್ ಕಲಿಕೆಯನ್ನು ಕಲಿಸಲಾಗುವುದು ಎಂದು ಹೇಳಿದರು.
ಮುಖ್ಯ ತರಬೇತುದಾರರಾದ ಗಾನವಿ, ಭಗವಾನ್, ಮನಮೋಹನ್, ನವೀನ್, ವೆಂಕಟರೆಡ್ಡಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement