ಇಂದು ರಾಜೇಗೌಡ ನಾಮಪತ್ರ ಸಲ್ಲಿಕೆ
ಕ.ಪ್ರ.ವಾರ್ತೆ, ಕೊಪ್ಪ, ಏ.14
ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಏ. 15ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಕಾಂಗ್ರೆಸ್ ಚುನವಣಾ ಸಮನ್ವಯ ಸಮಿತಿಯ ಪ್ರಭಾರಿ ಅಧ್ಯಕ್ಷ ಎಚ್.ಜಿ. ವೆಂಕಟೇಶ್ ತಿಳಿಸಿದರು.
ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ನಾಮಪತ್ರ ಸಲ್ಲಿಕೆಯನ್ನು ಸರಳವಾಗಿ ನಡೆಸಲು ತೀರ್ಮಾನಿಸಲಾಗಿದ್ದು, ನಂತರ ಲಾಲ್ ಬಹುದ್ದೂರ್ ಶಾಸ್ತ್ರಿ ಕ್ರೀಡಾಂಗಣದಲ್ಲಿ ಸಭೆ ಏರ್ಪಡಿಸಲಾಗಿದೆ ಎಂದರು.
ಪಕ್ಷದ ಕಾರ್ಯಕರ್ತರು ಅಭಿಮಾನಿ ಮಿತ್ರರು ಹಾಗೂ ಸಾರ್ವಜನಿಕರು ಭಾಗವಹಿಸುವಂತೆ ವಿನಂತಿಸಿದ್ದಾರೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜಿ. ಶೋಭಿಂತ್ ಮಾತನಾಡಿ, ಶೃಂಗೇರಿ ಕ್ಷೇತ್ರದ ಜನತೆ ಬುದ್ಧಿವಂತ ಹಾಗೂ ಪ್ರಜ್ಞಾವಂತರು. ಈ ರಾಜ್ಯದಲ್ಲಿ ಯಾವ ಪಕ್ಷ ಅಧಿಕಾರ ಹಿಡಿಯುತ್ತದೆಂಬ ಮುಂದಾಲೋಚನೆ ಇರುವುದರಿಂದ ಈ ಬಾರಿ ಕಾಂಗ್ರೆಸ್‌ನ ಸರಳ ಸಜ್ಜನ ಟಿ.ಡಿ. ರಾಜೇಗೌಡರನ್ನು ಅಯ್ಕೆ ಮಾಡುತ್ತಾರೆಂಬ ನಂಬಿಕೆ ಇದೆ ಎಂದರು.
ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಎಂ, ಸತೀಶ್, ಎನ್.ಆರ್. ಪುರ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ಅಂಶುಮಂತ್, ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಯವ ಕಾಂಗ್ರೆಸ್ ಅಧ್ಯಕ್ಷ ನಿಖಿಲ್, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಎಂ.ಸಿ. ಅಶೋಕ್, ಮುಖಂಡ ಅಸಗೋಡು ನಾಗೇಶ್, ಎಚ್.ಎಸ್. ಇನೇಶ್, ಒಣಿ ತೋಡ ರತ್ನ ತೋಟರತ್ನಾಕರ್ ಮೊದಲಾದವರು ಉಪಸ್ಥಿತರಿದ್ದರು.