ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಕುತೂಹಲ ಕೆರಳಿಸಿದ ತ್ರಿಕೋನ ಸ್ಪರ್ಧೆ

Lingaraj Badiger
Updated On : 15 Apr 2013, 11:05 am

ಮೂಡಿಗೆರೆ: ಈ ಬಾರಿಯ ಮೂಡಿಗೆರೆ ವಿಧಾನಸಭಾ ಚುನಾವಣೆ ಭಾರೀ ಕುತೂಹಲ ಮೂಡಿಸಿದೆ. ಮೂಡಿಗೆರೆ ಮೀಸಲು ಕ್ಷೇತ್ರವಾಗಿದ್ದು. ಘಟಾನುಘಟಿಗಳೇ ಸ್ಫರ್ಧೆಗೆ ಇಳಿದಿದ್ದು, ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.  ಬಿಜೆಪಿಯಿಂದ ಕಳೆದ 2 ಬಾರಿ ಸ್ಪರ್ಧಿಸಿ ಜಯಶೀಲರಾದ ಶಾಸಕ ಎಂ.ಪಿ. ಕುಮಾರಸ್ವಾಮಿ ಹ್ಯಾಟ್ರಿಕ್ ಗೆಲವಿನ ಧಾವಂತದಲ್ಲಿದ್ದಾರೆ.   ಕಳೆದ ಸಾಲಿನ ಚುನಾವಣೆಯಲ್ಲಿ ಅಲ್ಪ ಮತದಿಂದ ಪರಾಭವಗೊಂಡ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಅವರನ್ನು ಗೆಲ್ಲಿಸಲು ವಿಧಾನ ಪರಿಷತ್ ಸದಸ್ಯೆ ಮೋಟಮ್ಮ ಪಣ ತೊಟ್ಟಿದ್ದರೆ, ಕಳೆದ ಚುನಾವಣೆಯಲ್ಲಿ ಜೆಡಿಎಸ್ ಟಿಕೆಟ್ ವಂಚಿತ ಬಿಎಸ್‌ಪಿಯಿಂದ ಸ್ಪರ್ಧಿಸಿ ಪರಾಭವಗೊಂಡ ಬಿ.ಬಿ. ನಿಂಗಯ್ಯ ಕಾಂಗ್ರೆಸ್ ಸೇರಿದ್ದರು. ಆದರೆ ಈ ಬಾರಿ ಕಾಂಗ್ರೆಸ್ ತೊರೆದು ಜೆಡಿಎಸ್‌ನಿಂದ ಬಿ. ಫಾರಂ ಪಡೆದು ಚುನಾವಣಾ ಕಣದಲ್ಲಿದ್ದಾರೆ. ಎಂ.ಪಿ.ಕುಮಾರಸ್ವಾಮಿ, ಬಿ.ಎನ್. ಚಂದ್ರಪ್ಪ, ಬಿ.ಬಿ.ನಿಂಗಯ್ಯ ಮೂವರ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು,  ಈ ಚುನಾವಣೆಯಲ್ಲಿ ಮೂಡಿಗೆರೆ ಮೀಸಲು ಕ್ಷೇತದಿಂದ ವಿಜಯ ಮಾಲೆ  ಯಾರ ಕೊರಳಿಗೆ ಎಂದು ಕಾದು ನೋಡಬೇಕಾಗಿದೆ.
17ಕ್ಕೆ ಕಾಂಗ್ರೆಸ್ ನಾಮಪತ್ರ
ತರೀಕೆರೆ: ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ 17 ರಂದು ಮೆರವಣಿಗೆಯೊಂದಿಗೆ ನಾಮಪತ್ರ ಸಲ್ಲಿಸುವುದಾಗಿ ಜಿ.ಎಚ್. ಶ್ರೀನಿವಾಸ್ ತಿಳಿಸಿದ್ದಾರೆ. ಮೆರವಣಿಗೆಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಮುಖಂಡರು, ಪಕ್ಷದ ತಾಲೂಕಿನ ಮುಖಂಡರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಪಥ ಸಂಚಲನ
ಕೊಪ್ಪ: ಚುನಾವಣಾ ಕರ್ತವ್ಯಕ್ಕೆ ಬಂದಿರುವ ಗಡಿ ಭದ್ರತಾ ಪಡೆಯ 100 ಯೋಧರು ಪಟ್ಟಣದ ಕುವೆಂಪು ವೃತ್ತದಿಂದ ಇಂದಿರಾ ನಗರ, ಕಾಳಿದಾಸ ರಸ್ತೆ ಸೇರಿದಂತೆ ವಿವಿಧ ರಸ್ತೆಗಳಲ್ಲಿ ಸಶಸ್ತ್ರ ಪಥ ಸಂಚಲನ ನಡೆಸಿದರು.  ಇವರೊಂದಿಗೆ ಡಿವೈಎಸ್‌ಪಿ ಜಗದೀಶ್, ವೃತ್ತ ನಿರೀಕ್ಷಕ ಸಂಗಮೇಶ್ ಪಾಟೀಲ್, ಪಿಎಸ್‌ಐ ಗವಿರಾಜ್ ಭಾಗವಹಿಸಿದ್ದರು.
ಉಪಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ
ಶಿರಾಳಕೊಪ್ಪ: ಬಿಜೆಪಿಯ ತಾಲೂಕು ಉಪಾಧ್ಯಕ್ಷ ನಾಗನಗೌಡ ಕೆ. ಪಾಟೀಲ್ ಮುಳಕೊಪ್ಪ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿರುವದಾಗಿ ತಿಳಿಸಿದ್ದಾರೆ. ಶಿರಾಳಕೊಪ್ಪದಲ್ಲಿ ಪತ್ರಿಕಾ ಹೇಳಿಕೆ ನೀಡಿರುವ ಅವರು ಮಂಗಳವಾರ ವಿಧಾನಸಭೆಗೆ ನಡೆಯುವ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವದಾಗಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಕಳೆದ ಒಂದು ವರ್ಷಗಳ ಹಿಂದೆ ಬಿಜೆಪಿ ಸೇರಿದ್ದ ಅವರು ಅಲ್ಲಿಯಾವುದೇ ಮನ್ನಣೆ ದೊರೆಯದ ಕಾರಣ ಪಕ್ಷತೊರೆಯುತ್ತಿರುವದಾಗಿ ತಿಳಿಸಿದ್ದಾರೆ. ಹಾಗೆಯೇ ಬಿಜೆಪಿ ಸೇರುವ ಮೊದಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ನಾಗನಗೌಡ ಕೆಪಿಸಿಸಿ ಸದಸ್ಯರಾಗಿ ಆಯ್ಕೆ ಆಗಿದ್ದ ಶಾಂತವೀರಪ್ಪ ಗೌಡ ತಮಗೆ ಸರಿಯಾದ ರೀತಿ ಸಹಕರಿಸದೇ ಹಿಂದೆ ನಡೆದ ಜಿಪಂ, ತಾಪಂ ಚುನಾವಣೆಯಲ್ಲಿ ಸ್ಪಂದಿಸದೇ ನಿರ್ಲಕ್ಷ್ಯ ಮಾಡಿದ ಕಾರಣ ಆಗ ಕಾಂಗ್ರೆಸ್ ಪಕ್ಷ ಬಿಟ್ಟು ಬಂದಿದ್ದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement