ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ತರೀಕೆರೆಯಲ್ಲಿ ಜಯಂತಿ

Lingaraj Badiger
Updated On : 15 Apr 2013, 11:08 am

ತರೀಕೆರೆ: ತಾಲೂಕು ಅಡಳಿತದಿಂದ ಪಟ್ಟಣದ ತಾಪಂ ಸಭಾಂಗಣದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ರವರ 122ನೇ ಜಯಂತಿಯನ್ನು ಏರ್ಪಡಿಸಲಾಗಿತ್ತು.
ಉಪ ವಿಭಾಗಾಧಿಕಾರಿ ಜಿ. ಅನುರಾಧ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿ, ಅಂಬೇಡ್ಕರ್ ಅವರು ಅನುಭವಿಸಿದ ಕಹಿ ಘಟನೆಗಳೆ ಅವರನ್ನು ರಾಷ್ಟ್ರ ನಿರ್ಮಾಣದಲ್ಲಿ ತೊಡಗಿಸಿಕೊಳ್ಳಲು ಸಹಕಾರಿಯಾಯಿತು ಎಂದು ತಿಳಿಸಿದರು.
 ಡಿವೈಎಸ್‌ಪಿ ಸದಾನಂದ ಬಿ. ನಾಯಕ್ ಮಾತನಾಡಿ, ಸಂವಿಧಾನ ರಚನೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪಾತ್ರ ಅಮೂಲ್ಯವಾದುದು. ಅವರು ಕೊಟ್ಟ ಸಂವಿಧಾನ ವಿಶ್ವದಲ್ಲೇಮಾದರಿಯಾಗಿದೆ ಎಂದರು.
ತಹಸೀಲ್ದಾರ್ ರಂಜಿತ ಸಮಾರಂಭದ ಅಧ್ಯಕ್ಷೆತೆ ವಹಿಸಿ ಮಾತನಾಡಿ, ಅಂಬೇಡ್ಕರ್ ತುಳಿತಕ್ಕೊಳಗಾದ ಎಲ್ಲ ವರ್ಗದ ಪರವಾಗಿ ಧ್ವನಿ ಎತ್ತಿದ ಮಹನೀಯರಾಗಿದ್ದಾರೆ ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement