ವಿಧವೆ ಮೇಲೆ ನೌಕರನೊಬ್ಬ ಹಲ್ಲೆ: ದೂರು ದಾಖಲು
ಮೂಡಿಗೆರೆ: ತಾಲೂಕಿನ ಕಳಸ ಸಮೀಪದ ಸಂಸೆ ಗ್ರಾಪಂ ವ್ಯಾಪ್ತಿಯ ಟೀ ಎಸ್ಟೇಟ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ವಿಧವೆ ಮಹಿಳೆಯೊಬ್ಬರ ಮೇಲೆ ಅದೇ ಎಸ್ಟೇಟ್‌ನಲ್ಲಿ ಕೆಲಸ ಮಾಡುತ್ತಿದ್ದ ನೌಕರನೊಬ್ಬ ಹಲ್ಲೆ ಮಾಡಿರುವ ಬಗ್ಗೆ ವರದಿಯಾಗಿದೆ.
ಭಾನುವಾರ ರಾತ್ರಿ ಸಂಸೆಯ ಕುಟ್ಟಿಗೆಕೊಂಡ ಎಂಬಲ್ಲಿದ್ದ ತಮ್ಮ ಮನೆಯಲ್ಲಿ ಮಗಳೊಂದಿಗೆ ಮಲಗಿದ್ದ ಸಮಯದಲ್ಲಿ. ರಾತ್ರಿ ಸಮೀಪದ ಟೀ ಎಸ್ಟೇಟ್‌ನಲ್ಲಿ ವಾಸವಿದ್ದ ನಾಗರಾಜ ಎಂಬವ ತನ್ನ ಮನೆಗೆ ನುಗ್ಗಿ ಅವಾಚ್ಯ ಶಬ್ದಗಳಿಂದ ಬೈದು, ದೊಣ್ಣೆಯಿಂದ ಥಳಿಸಿದ್ದಾನೆ ಎಂದು ಮಹಿಳೆ ದೂರಿನಲ್ಲಿ ಹೇಳಿದ್ದಾರೆ.
ಮಹಿಳೆಯ ಕೈ ಹಾಗೂ ಬೆನ್ನಿಗೆ ತೀವ್ರ ಸ್ವರೂಪದ ಗಾಯಗಳಾಗಿ ಕಳಸದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ಕುದುರೇಮುಖ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
--