ಕೆಜಿಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ
ತರೀಕೆರೆ: ಕರ್ನಾಟಕ ಜನತಾ ಪಕ್ಷದ ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ಡಿ.ಎಸ್. ಸುರೇಶ್ ತರೀಕೆರೆ ಕೆಜೆಪಿ ಅಭ್ಯರ್ಥಿಯಾಗಿ ಸೋಮವಾರ ತಮ್ಮ ಬೆಂಬಲಿಗರೊಂದಿಗೆ ಮಿನಿ ವಿಧಾನಸೌಧಕ್ಕೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ನಂತರ ಸುದ್ದಿಗಾರರೊಡನೆ ಮಾತನಾಡಿ, 17 ರಂದು ಪಕ್ಷದ ಜಿಲ್ಲಾ ಮುಖಂಡರು, ಕಾರ್ಯಕರ್ತರ ಮೆರವಣಿಗೆಯೊಂದಿಗೆ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದರು.
--