ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಇಂದು ದತ್ತ, ಕೆಂಪರಾಜು ನಾಮಪತ್ರ

Lingaraj Badiger
Updated On : 17 Apr 2013, 10:56 am

ಕಡೂರು: ಕಡೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ವೈಎಸ್‌ವಿ ದತ್ತ ಬುಧವಾರ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಜಿಲ್ಲಾ ಜೆಡಿಎಸ್ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸನ್ನ ಹೇಳಿದ್ದಾರೆ.
ಬೆಳಗ್ಗೆ ತಮ್ಮ ಸ್ವಗ್ರಾಮವಾದ ಯಗಟಿ ಹಾಗೂ ಕಡೂರು ಪಟ್ಟಣದಲ್ಲಿ ವಿವಿಧ ದೇವಾಲಯಗಳಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಪಟ್ಟಣದ ಎಪಿಎಂಸಿ ಬಳಿಯಿರುವ ಶ್ರೀ ವೆಂಕಟೇಶ್ವರ ದೇವಾಲಯದಿಂದ ಸಾವಿರಾರು ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಭಾಗವಹಿಸಿ ಬಸವೇಶ್ವರ ವೃತ್ತ, ಮರವಂಜಿ ವೃತ್ತದಿಂದ ಕೆಎಲ್‌ವಿ ವೃತ್ತದ ಮೂಲಕ ಜೈನ್ ದೇವಾಲಯದಿಂದ ತಾಲೂಕು ಕಚೇರಿಗೆ ಆಗಮಿಸಿ ತಮ್ಮನ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಬಿಎಸ್‌ಆರ್ ಕಾಂಗ್ರೆಸ್‌ನಿಂದ ಕೆ.ಎಂ. ಕೆಂಪರಾಜು ಬೆಳಗ್ಗೆ 11 ಗಂಟೆಗೆ ಮರವಂಜಿ ವೃತ್ತದಿಂದ ತಮ್ಮ ಸಾವಿರಾರು ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಭಾಗವಹಿಸಲಿರುವ ಅವರು ಕೆಎಲ್‌ವಿ ವೃತ್ತದ ಮೂಲಕ ತಾಲೂಕು ಕಚೇರಿಗೆ ತೆರಳಿ ತಮ್ಮ ಮುಖಂಡರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ.
ಕಾಂಗ್ರೆಸ್‌ಗೆ ಜಯ: ವಿಶ್ವಾಸ
ಕಡೂರು: ಶಾಸಕರು ಹಾಗೂ ಮಾಜಿ ವಿಧಾನಪರಿಷತ್ ಸದಸ್ಯರು ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಮಾಡದೆ ಜನರ ಸಮಸ್ಯೆ ಬಗ್ಗೆ ಸ್ಪಂದಿಸಿದ ಹಿನ್ನೆಲೆಯಲ್ಲಿ ಬೇಸತ್ತಿರುವ ಮತದಾರರು ಕಾಂಗ್ರೆಸ್‌ನ್ನು ಗೆಲ್ಲಿಸಲಿದ್ದಾರೆ ಎಂದು ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಕೆ.ಎಸ್. ಆನಂದ್ ಹೇಳಿದ್ದಾರೆ.
 ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆನಂದ್, ಕಳೆದ ಮೂರು ವರ್ಷದಿಂದ ಕ್ಷೇತ್ರದ ಜನರ ಸಮಸ್ಯೆ ಕೇಳುವವರು ಇಲ್ಲದೆ ಆಡಳಿತ ವ್ಯವಸ್ಥೆ ಕುಸಿದಿದೆ. ರೈತರು ಹಾಗೂ ಕೂಲಿ ಕಾರ್ಮಿಕರ ಸ್ಥಿತಿಗತಿಯನ್ನು ಕೇಳದೆ ಸಮಸ್ಯೆ ಪರಿಹರಿಸುವಲ್ಲಿ ಶಾಸಕ ಡಾ.ವೈ.ಸಿ. ವಿಶ್ವನಾಥ್ ಮತ್ತು ಮಾಜಿ ವಿಧಾನಪರಿಷತ್ ಸದಸ್ಯ ವೈ.ಎಸ್.ವಿ. ದತ್ತರವರು ಯಾವುದೇ ಕ್ರಮ ಕೈಗೊಳ್ಳದೆ ಬರಗಾಲ ಸಮಸ್ಯೆ ನಿರ್ವಹಣೆಯಲ್ಲಿ ವಿಫಲರಾಗಿದ್ದಾರೆ. ಲೋಕಸಭಾ ಸದಸ್ಯ ದೇವೇಗೌಡರು ಗೆದ್ದು ಹೋದ ಮೇಲೇ ಕ್ಷೇತ್ರದಲ್ಲಿರುವ ಬರಗಾಲದ ಕುರಿತು ಒಂದೂ ಅಧಿಕಾರಿಗಳ ಸಭೆ ನಡೆಸದೆ ಕ್ಷೇತ್ರವನ್ನು ನಿರ್ಲಕ್ಷ್ಯ ಮಾಡಿದ್ದಾರೆ. ದತ್ತರವರು  ಶಾಸಕರಾದರೆ ಕ್ಷೇತ್ರದಲ್ಲಿ ಹಲವರು ಶಾಸಕರಾಗುವ ಮೂಲಕ ಅರಾಜಕತೆ ಉಂಟಾಗುತ್ತದೆ ಎಂದು ಆರೋಪಿಸಿದರು.
 ಕ್ಷೇತರ ಜನರು ಕೆಲಸ ಮಾಡುವ ವ್ಯಕ್ತಿಯಾಗಿರುವ ಕಾಂಗ್ರೆಸ್ ಪಕ್ಷದ ಸಮರ್ಥ ಅಭ್ಯರ್ಥಿ ಕೆ.ಬಿ. ಮಲ್ಲಿಕಾರ್ಜುನ್‌ರನ್ನು ಆಯ್ಕೆ ಮಾಡಲಿದ್ದಾರೆ ಎಂದು ಹೇಳಿದರು. ಗೋಷ್ಠಿಯಲ್ಲಿ ಗುಮ್ಮನಹಳ್ಳಿ ಅಶೋಕ್, ನಟರಾಜ್, ಜೋಡಿತಿಮ್ಮಾಪುರ ನರಸಿಂಹ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement