ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಕಲಿತಿದ್ದನ್ನು ಮರೆಯಬೇಡಿ

Lingaraj Badiger
Updated On : 20 Apr 2013, 10:59 am

ಕ.ಪ್ರ ವಾರ್ತೆ, ನರಸಿಂಹರಾಜಪುರ, ಏ.19
ಬೇಸಿಗೆ ಶಿಬಿರದಲ್ಲಿ ಕಲಿತುಕೊಂಡ ತರಬೇತಿಗಳನ್ನು ಮಕ್ಕಳು ತಮ್ಮ ಮುಂದಿನ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಾಹಿತಿ ಎಂ. ಜಯಮ್ಮ ಕಿವಿಮಾತು ಹೇಳಿದರು.
ಶುಕ್ರವಾರ ಅಂಬೇಡ್ಕರ್ ಭವನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ನಡೆದ ಉಚಿತ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು.
ಸಂಗೀತ ಶಿಕ್ಷಕ ನಗರವಳ್ಳಿ ಕೃಷ್ಣಮೂರ್ತಿ ಮಾತನಾಡಿ, ಸಂಗೀತವು ಕೇವಲ 10 ದಿನಗಳಲ್ಲಿ ಕಲಿಯುವುದು ಸಾಧ್ಯವಿಲ್ಲ. ಸಂಗೀತಕ್ಕೆ ಸಪ್ತ ಸ್ವರಗಳೇ ಆಧಾರ. ಇಲ್ಲಿ ಕಲಿತುರುವ ಸಂಗೀತವನ್ನು ಮುಂದುವರಿಸಿಕೊಂಡು ಹೋಗಬೇಕು ಎಂದು ಸಲಹೆ ನೀಡಿದರು.
ಪ್ರತಿಭೆ ಗುರುತಿಸುವುದು: ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಜ್ಯೋತಿಲಕ್ಷ್ಮಿ ಮಾತನಾಡಿ, ನಮ್ಮ ಇಲಾಖೆಯ ಬಾಲ ವಿಕಾಸ ಅಕಾಡೆಮಿ ವತಿಯಿಂದ ಪ್ರತಿ ವರ್ಷ ಉಚಿತ ಬೇಸಿಗೆ ಶಿಬಿರ ಹಮ್ಮಿಕೊಳ್ಳಲಾಗುತ್ತದೆ. 6 ವರ್ಷದಿಂದ 16 ವರ್ಷದ ಮಕ್ಕಳಿಗೆ ಅವಕಾಶವಿದೆ. ಪಠ್ಯೇತರ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಿ ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಹೊರ ತರುವುದೇ ಮಕ್ಕಳ ಬೇಸಿಗೆ ಶಿಬಿರದ ಉದ್ದೇಶವಾಗಿದೆ ಎಂದರು.
ಮುಖ್ಯ ಅತಿಥಿಗಳಾಗಿ ಯೋಗ ಶಿಕ್ಷಕ ಸುಕೇಶ್, ಬಿಆರ್‌ಸಿ ಕೃಷ್ಣನಾಯಕ್, ಕಲಾವಿದ ಪುರುಶೋತ್ತಮ್, ಯಡಗೆರೆ ಮಂಜುನಾಥ್, ಪ್ರತಿಮ ಉಪಸ್ಥಿತರಿದ್ದರು.
ತೃಪ್ತಿ ಮತ್ತು ಸಂಗಡಿಗರು ಪ್ರಾರ್ಥಿಸಿದರು. ಕಾವ್ಯ ಕಾರ್ಯಕ್ರಮ ನಿರೂಪಿಸಿದರು. 10 ದಿನಗಳ ಮಕ್ಕಳ ಬೇಸಿಗೆ ಶಿಬಿರದಲ್ಲಿ ಚಿತ್ರ ಕಲೆ, ಸಂಗೀತ ಅಭ್ಯಾಸ, ಯೋಗ, ವ್ಯಕ್ತಿತ್ವ ವಿಕಸನ ಮುಂತಾದ ತರಬೇತಿಗಳು ನಡೆಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement