ಜೆಡಿಎಸ್‌ನಿಂದ ನೀತಿ ಸಂಹಿತೆ ಉಲ್ಲಂಘನೆ: ದೂರು
ಚಿಕ್ಕಮಗಳೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿರುವ ಸಂಬಂಧ ಜೆಡಿಎಸ್ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ಎಂಸಿಎಂಸಿ ಸಮಿತಿ ಅಧ್ಯಕ್ಷ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರು ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.
ಜೆಡಿಎಸ್ ನೀತಿ ಸಂಹಿತೆ ಉಲ್ಲಂಘನೆ ಮಾಡಿದೆ ಎಂದು ಬಿಜೆಪಿಯ ಜಿಲ್ಲಾ ಕಾರ್ಯದರ್ಶಿ ವರಸಿದ್ಧಿ ವೇಣುಗೋಪಾಲ್ ದೂರು ಸಲ್ಲಿಸಿದ್ದರ ಮೇರೆಗೆ ಕ್ರಮಕ್ಕೆ ಶಿಫಾರಸ್ಸು ಮಾಡಲಾಗಿದೆ.
ಎರಡು ಕಡೆ ಮುದ್ರಣವಾಗಿರುವ 2 ಪಾಂಪ್ಲೆಟ್‌ಗಳ ಜೆರಾಕ್ಸ್ ಪ್ರತಿಗಳನ್ನು ಲಗತ್ತಿಸಲಾಗಿದ್ದು, ಸದರಿ ಪಾಂಪ್ಲೆಟ್‌ನಲ್ಲಿ ಇರುವ ಮಾಹಿತಿಯು ಪ್ರಜಾಪ್ರತಿನಿಧಿ ಕಾಯ್ದೆ ಉಲ್ಲಂಘಿಸಿರುವುದು ಕಂಡು ಬರುತ್ತದೆ. ಯಾವ ಮುದ್ರಣಾಲಯದಲ್ಲಿ ಈ ಪ್ರತಿಗಳನ್ನು ಮುದ್ರಿಸಲಾಗಿದೆ ಎಂಬ ಬಗ್ಗೆ ವಿವರ ಇರುವುದಿಲ್ಲ. ನೀತಿ ಸಂಹಿತೆ ಉಲ್ಲಂಘನೆಯಾಗಿದ್ದು, ಕ್ರಮ ಕೈಗೊಳ್ಳಬೇಕು ಎಂದು ಶಿಫಾರಸ್ಸು ಮಾಡಲಾಗಿದೆ.