ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ನೀರಿನ ಸಮಸ್ಯೆ ನಿವಾರಣೆಗೆ ಕ್ರಮ

Lingaraj Badiger
Updated On : 20 Apr 2013, 10:51 am

ನರಸಿಂಹರಾಜಪುರ: ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಚ್.ಟಿ. ರಾಜೇಂದ್ರ ಅವರ 30 ವರ್ಷಗಳ ರಾಜಕೀಯ ಅನುಭವ, ಆದರ್ಶ ಹಾಗೂ ಅವರ ಮಾರ್ಗದರ್ಶನದಲ್ಲಿ ಚುನಾವಣೆಯ ಅಕಾಡಕ್ಕೆ ಇಳಿದಿದ್ದೇನೆ ಎಂದು ಶೃಂಗೇರಿ ಕ್ಷೇತ್ರದ ವಿಧಾನ ಸಭೆಯ ಜೆಡಿಎಸ್ ಅಭ್ಯರ್ಥಿ ತಲಕಾನೆ ರಾಜೇಂದ್ರ ತಿಳಿಸಿದರು.
ಶುಕ್ರವಾರ ರೋಟರಿ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನನಗೆ ರಾಜಕೀಯ ಕ್ಷೇತ್ರ ಹೊಸದಾದರೂ ಶೃಂಗೇರಿ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಅರಿವು ಇರುವುದರಿಂದ ಈ ಕ್ಷೇತ್ರದ ಬಗ್ಗೆ ಹಲವು ಕನಸುಗಳನ್ನು ಕಂಡಿದ್ದೇನೆ. ಅದನ್ನು ಸಾಕಾರಗೊಳಿಸುವ ಗುರಿ ಹೊಂದಿದ್ದೇನೆ. ಕ್ಷೇತ್ರದಲ್ಲಿ ತುಂಗೆ ಹಾಗೂ ಭದ್ರೆ ಹರಿಯುತ್ತಿದ್ದರೂ ಕುಡಿಯುವ ನೀರಿನ ಸಮಸ್ಯೆ ಇದೆ. 24 ಗಂಟೆಗಳ ಕಾಲವೂ ಜನರಿಗೆ ಕುಡಿಯುವ ನೀರು ಕೊಡುವ ನೀರಾವರಿ ಯೋಜನೆಗೆ ತಯಾರಿ ನಡೆಸಿದ್ದೇನೆ ಎಂದರು.
ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಚ್.ಟಿ. ರಾಜೇಂದ್ರ ಮಾತನಾಡಿ, ಕಳೆದ ಎರಡು ವಿಧಾನಸಭೆ ಚುನಾವಣೆಯಲ್ಲಿ ನಾನು ಸೋತಿದ್ದರೂ ಶೃಂಗೇರಿ ಕ್ಷೇತ್ರದ ಅಭ್ಯರ್ಥಿ ನಾನೇ ಎಂದು ಬಿಂಬಿಸಲಾಗಿತ್ತು. ಆದರೆ, ನಾನು ರಾಜಕೀಯ ಜೀವನದಲ್ಲಿ ಕೆಲವು ಸಿದ್ಧಾಂತಗಳನ್ನು ನಂಬಿಕೊಂಡು ಬಂದಿದ್ದೆ  ಕಳೆದ ಪಟ್ಟಣ ಪಂಚಾಯ್ತಿ ಚುನಾವಣೆ ಸಂದರ್ಭದಲ್ಲಿ ಹಣವಿಲ್ಲದೆ ಚುನಾವಣೆ ಇಲ್ಲ ಎಂಬುದು ನನ್ನ ಗಮನಕ್ಕೆ ಬಂದಿದೆ ಎಂದು ಹೇಳಿದರು.
ಬೇರೆ ಅರ್ಥ ಬೇಡ: ತಾಲೂಕು ಜೆಡಿಎಸ್ ಅಧ್ಯಕ್ಷ ಇ.ಸಿ. ಜೋಯಿ ಹಾಗೂ ಇತರೆ ಕೆಲವು ಜೆಡಿಎಸ್ ಮುಖಂಡರು ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ ಎಂದು ಎಚ್.ಟಿ. ರಾಜೇಂದ್ರ ತಿಳಿಸಿದರು.
ಕೆಲವು ದಿನಗಳಲ್ಲೇ ಬಿಜೆಪಿ ಹಾಗೂ ಕಾಂಗ್ರೆಸ್‌ನಿಂದಲೂ ಕೆಲವರು ಜೆಡಿಎಸ್ ಸೇರಲಿದ್ದಾರೆ ಎಂದು ಮಾಹಿತಿ ನೀಡಿದರು.  
ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ರಾಜ್ಯ ಯುವ ಜನತಾದಳದ ಪ್ರಧಾನ ಕಾರ್ಯದರ್ಶಿ ಕಣುವೆ ವಿನಯ್, ತಾ. ಕಾರ್ಯಾಧ್ಯಕ್ಷ ಹೊಸೂರು ಸುರೇಶ್, ಶೃಂಗೇರಿ ತಾಲೂಕು ಜೆಡಿಎಸ್ ಅಧ್ಯಕ್ಷ ಗಂಡಗಟ್ಟ ಮಂಜುನಾಥ್, ಜಿಲ್ಲಾ ಕಾರ್ಯದರ್ಶಿ ಅಸಗೋಡು ಅರವಿಂದ್, ಮುಖಂಡರಾದ ಬಿ.ಕೆ. ಜಾನಕೀರಾಮ್, ಎಸ್.ಎಸ್. ಶಾಂತಕುಮಾರ್, ಸತ್ಯನಾರಾಯಣಶೆಟ್ಟಿ ಮುಂತಾದವರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement