ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಪಠ್ಯ ಪೂರಕ ಚಟುವಟಿಕೆಯಿಂದ ಸಾಮರ್ಥ್ಯ ವೃದ್ಧಿ

Lingaraj Badiger
Updated On : 20 Apr 2013, 11:01 am

ಕ.ಪ್ರ ವಾರ್ತೆ, ನರಸಿಂಹರಾಜಪುರ, ಏ.19
ಪಠ್ಯಕ್ಕೆ ಪೂರಕವಾದ ಚಟುವಟಿಕೆಗಳಿಂದ ವಿದ್ಯಾರ್ಥಿಗಳಲ್ಲಿರುವ ಸಾಮರ್ಥ್ಯ, ಪ್ರತಿಭೆ ಹೊರ ಬರಲಿದೆ ಎಂದು  ತೀರ್ಥಹಳ್ಳಿಯ ತುಂಗಾ ಮಹಾವಿದ್ಯಾಲಯದ ಕನ್ನಡ ಸಹ ಪ್ರಾಧ್ಯಾಪಕ ಡಾ.ಬಿ. ಗಣಪತಿ ತಿಳಿಸಿದರು.
ಅವರು ಶುಕ್ರವಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2012-13ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ, ಎನ್‌ಎಸ್‌ಎಸ್ ಚಟುವಟಿಕೆಗಳು ಹಾಗೂ ವಿಜ್ಞಾನ, ಕಲಾ, ವಾಣಿಜ್ಯ, ವ್ಯವಹಾರ ನಿರ್ವಹಣೆ, ಸಮಾಜಕಾರ್ಯಗಳ ವೇದಿಕೆಗಳ ಸಮಾರೋಪ ಸಮಾರಂಭದಲ್ಲಿ ಸಮಾರೋಪ ಭಾಷಣ ಮಾಡಿದರು.
ವಿದ್ಯಾರ್ಥಿಗಳು ಅಹಂಕಾರ ಬಿಟ್ಟು ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು. ಹಿರಿಯರನ್ನು ಗೌರವದಿಂದ ಕಾಣುವ ಗುಣ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕ್ರೀಡೆಯಿಂದ ಆರೋಗ್ಯ: ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದ ಪಶು ಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಎ.ಎಲ್. ವಿಜಯಕುಮಾರ್ ಮಾತನಾಡಿ, ಆಧುನಿಕ ಒತ್ತಡದ ಬದುಕಿನಲ್ಲಿ ಕ್ರೀಡೆಯಿಂದ ಆರೋಗ್ಯ ಉತ್ತಮಗೊಳ್ಳಲಿದೆ. ಆತ್ಮವಿಶ್ವಾಸ, ದೈಹಿಕ ಧೃಡತೆ ಹೆಚ್ಚಾಗಲಿದೆ ಎಂದರು.
ಸಭೆಯ ಅಧ್ಯಕ್ಷತೆಯನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಕೆ. ಪೂರ್ಣೇಶ್ ವಹಿಸಿದ್ದರು. ಇದೇ ಸಂದರ್ಭದಲ್ಲಿ ಕಾಲೇಜಿನಲ್ಲಿ ಈ ಹಿಂದೆ ಸೇವೆ ಸಲ್ಲಿಸಿದ್ದ ಅತಿಥಿ ಉಪನ್ಯಾಸಕ ನಾಗೇಶ್ ಅವರನ್ನು ಅಭಿನಂದಿಸಲಾಯಿತು.
ಕ್ರೀಡಾ ಸಂಚಾಲಕ ಹಾಗೂ ಉಪನ್ಯಾಸಕ ಪ್ರೊ. ವಿಶ್ವನಾಥ್ ಕ್ರೀಡಾ ವರದಿ ವಾಚಿಸಿದರು. ಮಾಲಿನಿ ಪ್ರಾರ್ಥಿಸಿ, ಶ್ರೀನಿಧಿ ಮತ್ತು ಆಕರ್ಶ ಕಾರ್ಯಕ್ರಮ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement