ಜನ ಮೆಚ್ಚುವ ಅಭಿವೃದ್ಧಿ ಮಾಡಿದ ತೃಪ್ತಿ ಇದೆ
ಕನ್ನಡ ಪ್ರಭ ವಾರ್ತೆ ಟಿ ಕೊಪ್ಪ ಟಿ ಏ.20
ಶೃಂಗೇರಿ ಕ್ಷೇತ್ರದಲ್ಲಿ ಎಲ್ಲರನ್ನು ಸಮಾನ ರೀತಿಯಲ್ಲಿ ಪರಿಗಣಿಸಿ ಜನ ಮೆಚ್ಚುವ ಅಭಿವೃದ್ಧಿ ಕಾರ್ಯ ಮಾಡಿದ ತೃಪ್ತಿ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಎನ್. ಜೀವರಾಜ್ ತಿಳಿಸಿದರು.
ಪಟ್ಟಣದ ಮೇಲಿನ ಪೇಟೆಯಲ್ಲಿ ಮತಯಾಚನಾ ಸಭೆಯಲ್ಲಿ ಮಾತನಾಡಿ, ರಾಜ್ಯ ಸರ್ಕಾರದ ಅಧಿಕಾರದ ಅವಧಿಯಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿಗೆ ರು. 467 ಕೋಟಿ ಅನುದಾನ ನೀಡುವುದರ ಮೂಲಕ ಅವರ ಅಭಿವೃದ್ಧಿಗೆ ಶ್ರಮಿಸಿದ್ದೇವೆ ಎಂದರು.
ನಾನು ಶಾಸಕನಾದ ಅವಧಿಯಲ್ಲಿ ಸಾಮರ್ಥವಾಗಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದು, ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಶ್ರಮ ಹಾಕಿ 2 ಪ್ರಥಮ ದರ್ಜೆ ಕಾಲೇಜು, ಪಿಯುಸಿ ಕಾಲೇಜು, ಕೊಪ್ಪದಲ್ಲಿ ಬಿ.ಎಸ್ಸಿ, ಎಂ.ಕಾಂ ಕಾಲೇಜು ಮತ್ತಿತರೆ ಅಭಿವೃದ್ಧಿ ಮಾಡಿದ್ದೇನೆ ಎಂದರು. ಕ್ಷೇತ್ರದಲ್ಲಿ ಬಿಜೆಪಿಗೆ ಮತ ನೀಡುವ ಮೂಲಕ ವಿರೋಧಿಗಳಿಗೆ ತಕ್ಕ ಉತ್ತರ ನೀಡಿ ಎಂದು ಮತದಾರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ 25 ಜನ ಯುವಕರು ಕಾಂಗ್ರೆಸ್ ಮತ್ತು ಜೆಡಿಎಸ್ನಿಂದ ಬಿಜೆಪಿಗೆ ಸೇರ್ಪಡೆಯಾದರು. ಬಿಜೆಪಿ ಜಿಲ್ಲಾ ಸಂಘಟನಾ ಪ್ರಧಾನ ಕಾರ್ಯದರ್ಶಿ ಎಸ್.ಎನ್. ರಾಮಸ್ವಾಮಿ, ಸುಚಿತ್ರ ನರೇಂದ್ರ, ತಾಪಂ ಅಧ್ಯಕ್ಷೆ ಪದ್ಮಾವತಿ ರಮೇಶ್ ಇದ್ದರು.