ಜೆಡಿಎಸ್ನಿಂದ ಕಾಂಗ್ರೆಸ್ಗೆ ಸೇರ್ಪಡೆ
ಕ.ಪ್ರ ವಾರ್ತೆ, ನರಸಿಂಹರಾಜಪುರ, ಏ.20
ನಾಗಲಾಪುರ ಗ್ರಾಪಂ ವ್ಯಾಪ್ತಿಯ ದಿಂಡಿನಕೊಪ್ಪದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಿಂದ ಒಟ್ಟು 30ಕ್ಕೂ ಹೆಚ್ಚು ಕಾರ್ಯಕರ್ತರು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಶನಿವಾರ ಕಾಂಗ್ರೆಸ್ಗೆ ಸೇರ್ಪಡೆಗೊಂಡರು.
ದಿಂಡಿನಕೊಪ್ಪದ 25 ಬಿಜೆಪಿ ಕಾರ್ಯಕರ್ತರು, 5 ಜೆಡಿಎಸ್ ಪಕ್ಷದ ಕಾರ್ಯಕರ್ತರು, ಬೆಟಗೇರಿಯ ಜೆಡಿಎಸ್ನ ಇಬ್ಬರು ಕಾರ್ಯಕರ್ತರು ಕಾಂಗ್ರೆಸ್ಗೆ ಸೇರ್ಪಡೆಗೊಂಡರು. ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಡಾ.ಕೆ.ಪಿ.ಅಂಶಮಂತ್ ಕಾಂಗ್ರೆಸ್ಗೆ ಸೇರ್ಪಡೆಗೊಂಡ ಕಾರ್ಯಕರ್ತರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಕಾಂಗ್ರೆಸ್ ಅಲೆ: ಈ ಸಂದರ್ಭದಲ್ಲಿ ತಾಲೂಕು ಕಾಂಗ್ರೆಸ್ ಅಧ್ಯಕ್ಷ ಡಾ.ಕೆ.ಪಿ. ಅಂಶುಮಂತ್ ಮಾತನಾಡಿ, ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಎಲ್ಲೆಡೆ ಕಾಂಗ್ರೆಸ್ ಅಲೆ ಎದ್ದಿದೆ. ಬಿಜೆಪಿ ಹಾಗೂ ಜೆಡಿಎಸ್ನಿಂದ ಯುವಕರು ಕಾಂಗ್ರೆಸ್ನತ್ತ ಬರುತ್ತಿರುವುದು ಉತ್ತಮ ಬೆಳವಣಿಗೆ. ಬಿಜೆಪಿ ಪಕ್ಷದ ದಬ್ಬಾಳಿಕೆ, ಭ್ರಷ್ಟಾಚಾರ, ಅಭಿವೃದ್ಧಿ ಹೆಸರಿನಲ್ಲಿ ಮಾಡುತ್ತಿರುವ ಲೂಟಿ ಪ್ರತಿಭಟಿಸಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಸೇರುತ್ತಿದ್ದಾರೆ ಎಂದರು.
ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕೆ.ಎಂ. ಗಂಗಾಧರ್ ಮಾತನಾಡಿ, ಜನಪರ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎಂಬ ಕ್ಷೇತ್ರದ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಬೇಡಿಕೆಯಂತೆ ಜನಪರ ಅಭ್ಯರ್ಥಿ ಟಿ.ಡಿ. ರಾಜೇಗೌಡಗೆ ಟಿಕೆಟ್ ನೀಡಲಾಗಿದೆ ಎಂದರು.
ಸಭೆಯಲ್ಲಿ ಖಾಂಡ್ಯ ಹೋಬಳಿ ಅಧ್ಯಕ್ಷ ಖಾಂಡ್ಯ ಸೋಮೇಶ್, ಕಾಂಗ್ರೆಸ್ ಮುಖಂಡರಾದ ಆರ್. ಸದಾಶಿವ, ಟಿ.ವಿ. ರಾಜು, ಶೇವಿಯಾರ್, ರಘುವೀರ್, ಕೆ.ಎ. ಅಬೂಬಕರ್, ಇ.ಸಿ. ಜೋಯಿ ಮತ್ತಿತರರು ಉಪಸ್ಥಿತರಿದ್ದರು.