ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಕಾಂಗ್ರೆಸ್, ಜೆಡಿಎಸ್‌ಗೆ ಸುಳ್ಳೇ ಬಂಡವಾಳ

Lingaraj Badiger
Updated On : 22 Apr 2013, 11:27 am

ಕ.ಪ್ರ.ವಾರ್ತೆ, ಚಿಕ್ಕಮಗಳೂರು, ಏ.21
ಜನಪರ ಕಾಳಜಿ, ಕ್ಷೇತ್ರದ ಅಭಿವೃದ್ಧಿಯತ್ತ ಯೋಜನೆ ಮಾಡದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಸುಳ್ಳಿನ ಕಂತೆಯನ್ನು ಬಂಡವಾಳವನ್ನಾಗಿಸಿಕೊಂಡು ಮತದಾರರನ್ನು ತನ್ನತ್ತ ಸೆಳೆಯಲು ಮಾಡುತ್ತಿರುವ ಪ್ರಯತ್ನಕ್ಕೆ ಜನ ತಣ್ಣೀರೆರಚುವ ಕಾಲ ಸನ್ನಿಹಿತವಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಸಿ.ಟಿ. ರವಿ  ಹೇಳಿದ್ದಾರೆ.
ನಗರದ ಉಪ್ಪಳ್ಳಿಯಲ್ಲಿ ಭಾನುವಾರ ನಡೆದ ಲಾರಿ ಚಾಲಕರ ಮತ್ತು ಮಾಲೀಕರ ಸಂಘದ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮದ ಸಮಸ್ಯೆ ಹೊತ್ತು ಜನಪ್ರತಿನಿಧಿಗಳ ಬಳಿ ಬಂದರೆ ಅದನ್ನು ಆಲಿಸುವ ಸೌಜನ್ಯವೂ ಇಲ್ಲದ ಬೈಗುಳದ ಸುರಿಮಳೆಗೈಯ್ಯುವ ಮೂಲಕ ಉತ್ತರಿಸುವ ನಾಯಕರು ಒಂದೆಡೆಯಾದರೆ, ಇರುವ ಅಧಿಕಾರವನ್ನು ಬಳಸಿಕೊಂಡು ಅಭಿವೃದ್ಧಿ ಮಾಡಲು ಅವಕಾಶವಿದ್ದರೂ ಸದ್ಬಳಕೆ ಮಾಡಿಕೊಳ್ಳಲಾಗದ ನಾಯಕರು ಮತ್ತೊಂದೆಡೆ. ಹೀಗೆ ಆಡಳಿತ ಪಕ್ಷವನ್ನು ಟೀಕೆ ಮಾಡುವುದನ್ನು ಬಿಟ್ಟರೆ ಸುಳ್ಳನ್ನು ಬಂಡವಾಳವನ್ನಾಗಿಸಿಕೊಂಡು ಬಂದಿದ್ದಾರೆ ಎಂದು ಪರೋಕ್ಷವಾಗಿ ವಿಪಕ್ಷಗಳನ್ನು ಟೀಕಿಸಿದರು.
ಸ್ಪಂದನೆಗೆ ಬದ್ಧ: ಲಾರಿ ಮಾಲೀಕರ ಮತ್ತು ಚಾಲಕರ ಸಂಘದ ಅಮಾನ್ ಮಾತನಾಡಿ, ಕಳೆದ 9 ವರ್ಷಗಳಿಂದ ವಿವಿಧ ಸಂಘ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸಿದ್ದೇನೆ.
ಆದರೆ, ಹಿಂದೆಂದೂ ಕಾಣದ ಅಭಿವೃದ್ಧಿಗೆ ಸ್ಪಂದಿಸಬೇಕೆಂಬ ಉದ್ದೇಶದಿಂದ ಸಚಿವ ರವಿಯವರನ್ನು ಸ್ವಯಂ ಪ್ರೇರಿತರಾಗಿ ಕರೆಸಿ ಊರಿನ ಏಳಿಗೆಗೆ ಸ್ಪಂದಿಸುವವರಿಗೆ ಕೈ ಜೋಡಿಸಬೇಕೆಂಬ ನಿರ್ಧಾರಕ್ಕೆ ನಾವೆಲ್ಲ ಬದ್ಧರಾಗಿದ್ದೇವೆ ಎಂದರು.
ರವಿ, ರಘು, ಇಮ್ರಾನ್, ಸಮೀರ್, ಶಫಿ, ವಿಜಿ ಇತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement