ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಚಿಕ್ಕಮಗಳೂರು

ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

Rashmi Kasaragodu
Updated On : 23 Apr 2013, 11:57 am

ತರೀಕೆರೆ: ಅಜ್ಜಂಪುರ ಹೋಬಳಿ ಸೊಲ್ಲಾಪುರ ಗ್ರಾಮದ ವ್ಯಕ್ತಿಯೊಬ್ಬರ ಮೇಲೆ ಕೆಲವರು ಹಲ್ಲೆ ನಡೆಸಿರುವುದನ್ನು ಖಂಡಿಸಿ, ಜಯಕರ್ನಾಟಕ ಸಂಘಟನೆ, ದಲಿತ ಸಂಘರ್ಷ ಸಮಿತಿ, ಸೇವಾಲಾಲ್ ಸೇನೆ ವತಿಯಿಂದ ಸೋಮವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ, ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಸಲ್ಲಿಸಿದರು.
ಜಯ ಕರ್ನಾಟಕದ ಟಿ.ಎನ್. ಜಗದೀಶ್, ಶಂಕರನಾಯ್ಕ, ಬಸವರಾಜನಾಯ್ಕ, ಕಿರಣ, ಕಾರ್ತಿಕ, ಮಂಜುನಾಥ್, ಬಸವರಾಜ್ ಮತ್ತಿತತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ತಾಲೂಕು ಅಜ್ಜಂಪುರ ಹೋಬಳಿ ಸೊಲ್ಲಾಪುರದ ವ್ಯಕ್ತಿಯೊಬ್ಬರ ಮೇಲೆ ಕೆಲವರು ದೊಣ್ಣೆ, ಕಲ್ಲುಗಳಿಂದ ಹಲ್ಲೆ ನಡೆಸಿದ್ದು, ದುರುದ್ದೇಶದಿಂದ ಕೆಲವರು ಈ ರೀತಿ ದೌರ್ಜನ್ಯ ಮತ್ತು ಹಲ್ಲೆ ನಡೆಸಿರುವುದು ಖಂಡನೀಯ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಈ ಕೂಡಲೇ ದೌರ್ಜನ್ಯದ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗಿ ಎಂದು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement